1. ಸುದ್ದಿಗಳು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೇ.3ರವರೆಗೂ ಲಾಕ್'ಡೌನ್ ವಿಸ್ತರಣೆ

Delhi CM Aravind Kejriwal

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಆಬ್ಬರ ದಿನದಿಂದ ದಿನಕ್ಕೆ  ಹೆಚ್ಚಾಗುತ್ತಲೇ ಇದ್ದು, ಆಮ್ಲಜನಕದ ಕೊರತೆ ಎದುರಾಗಿರುವ ಬೆನ್ನಲ್ಲೇ ಮೇ 3ರ ವರೆಗೂ ಲಾಕ್‌ಡೌನ್‌ ವಿಸ್ತರಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಹೇಳಿದ್ದಾರೆ. 

ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ನಿತ್ಯ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಲಾಕ್ ಡೌನ್ ಒಂದೇ ಪರಿಹಾರ ಎಂದು ಅವರು ತಿಳಿಸಿದ್ದಾರೆ.

ಒಂದು ವಾರದಿಂದ ಲಾಕ್‌ಡೌನ್‌ ಘೋಷಿಸಿ, ಜನರ ಗುಂಪುಗೂಡುವಿಕೆಯನ್ನು ನಿಯಂತ್ರಿಸಿದ್ದರೂ ದೆಹಲಿಯಲ್ಲಿ ಕೊರೋನಾ ಕಂಟಕ ಮುಂದುವರಿದಿದೆ. ಶನಿವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೆಹಲಿಯ ವಿವಿಧೆಡೆ ಹೊಸದಾಗಿ 24,103 ಜನಕ್ಕೆ ಕೊರೋನಾ ಸೋಂಕು ತಗುಲಿದೆ

ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಆರು ದಿನಗಳ ಲಾಕ್ ಡೌನ್ ಅವಧಿ ನಾಳೆ ಬೆಳಗ್ಗೆ ಐದು ಗಂಟೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಮತ್ತೆ ಮೇ 3ರ ವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂದು ಅವರು ಹೇಳಿದರು.

ದೆಹಲಿಯಲ್ಲಿ ದಿನನಿತ್ಯ ದಾಖಲೆ ಪ್ರಮಾಣದಲ್ಲಿ ಕೊರೊನಾ ಸೋಂಕು ಹೆಚ್ಚುತ್ತದೆ ಇದರ ತಡೆಗೆ ಸರ್ಕಾರದ ಮುಂದಿರುವ ಏಕೈಕ ಮಾರ್ಗ ಇದು. ಜನರು ಕೂಡ ಸರ್ಕಾರದ ಜೊತೆ ಕೈಜೋಡಿಸಿ ಸೋಂಕು ತಡೆಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ದೆಹಲಿಯಲ್ಲಿ ಲಾಕ್ ಡೌನ್ ಮೇ ತಿಂಗಳ 3ರ ಮುಂಜಾನೆ 5 ಗಂಟೆಯ ತನಕ ಇರಲಿದೆ. ಜನರು ಅನಗತ್ಯವಾಗಿ ಮನೆಬಿಟ್ಟು ಬರದಿರಿ ಎಂದು ಕೂಡ ಅವರು ಮನವಿ ಮಾಡಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುದಿಲ್ಲ.ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಲಾಲ್ ಡೌನ್ ಮೇ ತಿಂಗಳ ೩ ರವರೆಗೆ ವಿಸ್ತರಣೆ ಮಾಡಲಾಗಿದೆ .ಇದುವರೆಗೂ ಇರುವ ನಿಯಮಗಳನ್ನು ಮುಂದುವರಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಮಾಡಲಾಗಿದೆ ಖಾಸಗಿ ಕಂಪನಿಗಳಲ್ಲಿ ಮತ್ತು ಸಂಸ್ಥೆಗಳಲ್ಲಿ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಅಗತ್ಯ ಸೇವೆಗಳ ಎಂದಿನಂತೆ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ದಿನನಿತ್ಯ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ 700 ಮೆಟ್ರಿಕ್ ಟನ್ ಆಮ್ಲಜನಕ ಅಗತ್ಯವಿದೆ ಆದರೆ ಕೇಂದ್ರ ಸರ್ಕಾರ 490 ಮೆಟ್ರಿಕ್ ಟನ್ ಮಾತ್ರ ಪೂರೈಕೆ ಮಾಡುತ್ತಿವೆ. ಆಮ್ಲಜನಕ ಕೊರತೆ ಇರುವುದರಿಂದ ಆಸ್ಪತ್ರೆಗಳಲ್ಲಿ ದಿನನಿತ್ಯ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗಿದೆ ಹೀಗಾಗಿ ಶ್ರೀಘ್ರವಾಗಿ ಆಮ್ಲಜನಕ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ

Published On: 25 April 2021, 08:26 PM English Summary: Lockdown in Delhi extended till May 3

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.