News

ರಾಜ್ಯದಲ್ಲಿ ಇಂದು, ನಾಳೆಯ ಹವಾಮಾನ ಹೆಂಗಿದೆ ನೋಡಿ!

29 December, 2023 3:00 PM IST By: Hitesh
ವೆದರ್‌ ರಿಪೋರ್ಟ್‌

ರಾಜ್ಯದಲ್ಲಿ ಇಂದು ನಾಳೆ ಹವಾಮಾನದಲ್ಲಿ ಸಾಮಾನ್ಯ ಅಂಶವಿದೆ.

ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಸಾಮಾನ್ಯವಾಗಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದ ಸಮತಟ್ಟಾದ ಪ್ರದೇಶದಲ್ಲಿ ಅತೀ ಕಡಿಮೆ ಉಷ್ಣಾಂಶ 10.5 ಡಿಗ್ರಿ ಸೆಲ್ಸಿಯಸ್‌ ವಿಜಯಪುರದಲ್ಲಿ ದಾಖಲಾಗಿದೆ.

ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ. ಗುಡುಗು ಮುನ್ನೆಚ್ಚರಿಕೆ, ಭಾರೀ ಮಳೆ ಮುನ್ನೆಚ್ಚರಿಕೆ

ಹಾಗೂ ತಾಪಮಾನದ ಮುನ್ನೆಚ್ಚರಿಕೆ ಸೇರಿದಂತೆ ಯಾವುದೇ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿಲ್ಲ.

ಚಳಿ ಪ್ರಮಾಣ: ಇನ್ನು ಉತ್ತರ ಕರ್ನಾಟಕದ ಭಾಗದ ಒಂದೆರಡು ಕಡೆಗಳಲ್ಲಿ ಚಳಿ ಹೆಚ್ಚಾಗಿ ಇರಲಿದೆ.

ಚಳಿ ಪ್ರಮಾಣವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗಲಿದೆ ಅಂತ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ: ಒಣಹವೆ ಹಾಗೂ ವಿವಿಧ ಭಾಗದಲ್ಲಿ ಸಾಧಾರಣ ಮಳೆ ಆಗುತ್ತಿರುವುದರಿಂದ ಭಾರತೀಯ

ಹವಾಮಾನ ಇಲಾಖೆಯಿಂದ ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ?

ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು / ದಟ್ಟ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿವೆ.

ಇನ್ನು ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.  

ಮುಂದಿನ 48 ಗಂಟೆಯ ಅವಧಿ

ಬೆಂಗಳೂರಿನಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಸಹ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮೋಡ ಕವಿದ ವಾತಾವರಣ ಇರಲಿದೆ.

ಇನ್ನು ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ರಿಪೋರ್ಟ್‌ ತಿಳಿಸಿದೆ.