News

MGNREGA: ದನದ ಕೊಟ್ಟಿಗೆ ನಿರ್ಮಿಸಲು 43 ಸಾವಿರ ಸಹಾಯಧನ..

28 July, 2022 3:02 PM IST By: Maltesh
Mahatma Gandhi National Rural Employment Guarantee Act Cattle shed

ಹಾವೇರಿ: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ರೈತರಿಗೆ ಕೊಟ್ಟಿಗೆ ನಿರ್ಮಿಸಲು 57 ಸಾವಿರ ರೂಪಾಯಿಯ ಧನ ಸಹಾಯದೊಂದಿಗೆ  ನಿರ್ಮಾಣ ಮಾಡಲು ಆಯುಕ್ತಾಲಯದಿಂದ ಹೊಸ ಆದೇಶ ಹೊರಡಿಸಲಾಗಿದೆ ಎಂದು ಹಾವೇರಿ ಜಿಲ್ಲ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (CEO)  ಮೊಹಮ್ಮದ್‌ ರೋಷನ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

20-07-2022  ಆದೇಶದನ್ವಯ  ರೂ. 57,000/-ಗಳ ಎಲ್ಲ ವರ್ಗದ ಜನರಿಗೆ ವೈಯಕ್ತಿಕ ಆಧಾರಿತ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,  ಅಲೆಮಾರಿ ಬುಡುಕಟ್ಟಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು.

ಮಹಿಳಾ ಪ್ರಧಾನ ಕುಟುಂಬಗಳು, ವಿಕಲಚೇತನ ಕುಟುಂಬಗಳು, ಭೂ-ಸುಧಾರಣಾ ಫಲಾನುಭವಿಗಳು, ವಸತಿ ಯೋಜನೆಯಗಳ ಫಲಾನುಭವಿಗಳು, ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು ಹಾಗೂ ಸಣ್ಣ ಮತ್ತು ಅತೀ ಸಣ್ಣ ರೈತರ ಕುಟುಂಬಗಳು ಸದರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಪಡೆಯಲು ಅರ್ಹರಾಗಿದ್ದಾರೆ.

ಈ ಮೊದಲು ಎಸ್.ಸಿ. ಮತ್ತು ಎಸ್.ಟಿ. ಕುಟುಂಬಗಳಿಗೆ ಮಾತ್ರ ರೂ. 43,000/-ಗಳು ಇತರೆ ಕುಟುಂಬಗಳಿಗೆ ರೂ. 22,000/-ಗಳನ್ನು ದನದ ದೊಡ್ಡಿ ನಿರ್ಮಾಣಕ್ಕಾಗಿ ನೀಡಲಾಗುತ್ತಿತ್ತು.

ಇನ್ನು ವೈಯಕ್ತಿಕ ಕೊಟ್ಟಿಗೆ ನಿರ್ಮಾಣಕ್ಕಾಗಿ   ಜಿಲ್ಲೆಯ ಗ್ರಾಮೀಣ ಭಾಗದ ರೈತಾಪಿ ಜನರು  ತಮ್ಮ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ನೋದಾಯಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…

ಏನಿದು ನರೇಗಾ..?

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಜಿಸುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ [MGNREGS] ಯನ್ನು ಜಾರಿಗೊಳಿಸುವುದು ಮತ್ತು ಉಸ್ತುವಾರಿ ಗ್ರಾಮೀಣಾಭಿವೃದ್ದಿ ಆಯುಕ್ತಾಲಯದ ಜವಾಬ್ದಾರಿಯಾಗಿದೆ.ಕೂಲಿ ಉದ್ಯೋಗದ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆಗಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಅಕುಶಲ ದೈಹಿಕ ಕೆಲಸ ಮಾಡಲು ಇಚ್ಛಿಸುವ ಗ್ರಾಮೀಣ ಪ್ರದೇಶದ ವಯಸ್ಕರಿಗೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ ನೂರು ದಿನಗಳ ಉದ್ಯೋಗಾವಕಾಶಗಳನ್ನು ಸ್ಥಳೀಯವಾಗಿ ನೀಡಿ, ಬಡಜನರ ಬದುಕನ್ನು ಹಸನಾಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಡಜನರನ್ನು ತೊಡಗಿಸಿಕೊಂಡು ಕೃಷಿ ಕಾರ್ಮಿಕರಿಗೆ ಕೂಲಿ ನೀಡುವ ಉದ್ಯೋಗ, ಆಹಾರಭದ್ರತೆ, ದೀರ್ಘಕಾಲ ಬಾಳಿಕೆ ಬರುವಂತಹ ಸ್ವತ್ತುಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ [MGNREGS] ಕೈಗೊಳ್ಳಲಾಗುತ್ತಿದೆ.