ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಸಿತ್ರಾಂಗ್ ಚಂಡಮಾರುತ: ಈ ನಾಲ್ಕು ರಾಜ್ಯದಲ್ಲಿ ರೆಡ್ ಅಲರ್ಟ್!
ನವದೆಹಲಿಯಲ್ಲಿರುವ ಕಾಂಗ್ರೆಸ್‌ನ ಮುಖ್ಯ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು ಖರ್ಗೆ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದರು.
ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ 24 ವರ್ಷಗಳ ಬಳಿಕ ಪಕ್ಷದ ಅತ್ಯುನ್ನತ ಹುದ್ದೆಯನ್ನು ಗಾಂಧೀ ಕುಟುಂಬೇತರರು ಅಲಂಕರಿಸಿದಂತಾಗಿದೆ .
ಇದನ್ನೂ ಓದಿರಿ: ರಾಜ್ಯದಲ್ಲಿ ನೈರುತ್ಯ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ!
ಸಮಾರಂಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ನಾಯಕರು ಮತ್ತು ಸಂಸದರು ಇದ್ದರು.
ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಖರ್ಗೆ ಅವರು ಬುಧವಾರ ಬೆಳಿಗ್ಗೆ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೂ ನಮನ ಸಲ್ಲಿಸಿದರು.
ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹೊರಗುಳಿದ ನಂತರ ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗೆ ನೇರ ಸ್ಪರ್ಧೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇರ ಪೈಪೋಟಿಗೆ ಇಳಿದಿದ್ದರು.
ಈ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದರು.