ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವ ಬೆನ್ನಲ್ಲೇ ಚುನಾವಣಾ ಜಾಗೃತಿ ಹಾಗೂ ಮತದಾನದ ಕುರಿತು ಜಾಗೃತಿ ಪ್ರಾರಂಭವಾಗಿದೆ.
ಮತದಾನದ ಪ್ರಮಾಣವನ್ನು ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಉದ್ದೇಶದಿಂದ
ಈಚೆಗೆ ಮುಖ್ಯ ಚುನಾವಣಾಧಿಕಾರಿ ಕಚೇರಿ, ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಬಿಎಂಪಿ ವತಿಯಿಂದ
ವಿಶೇಷ ಚೇತನರು, ತೃತೀಯಲಿಂಗಿಗಳಿಂದ ಮತದಾನದ ಜಾಗೃತಿಯ ವಿಶೇಷ ಅಭಿಯಾನಕ್ಕೆ ರಾಜಭವನದ ಆವರಣದಲ್ಲಿ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿದರು.
ಕೇಂದ್ರ ಸರ್ಕಾರದಿಂದ ಕೃಷಿಕರಿಗೆ ಸಿಹಿಸುದ್ದಿ: ನ್ಯಾನೊ ಲಿಕ್ವಿಡ್ ಡಿಎಪಿ ರಸಗೊಬ್ಬರ ಪರಿಚಯ!
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಚುನಾವಣೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು,
ಮತ ಚಲಾವಣೆ ಹಕ್ಕನ್ನು ಪಡೆದಿರುವ ಪ್ರತಿಯೊಬ್ಬ ಪ್ರಜೆಯು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
ವಿಶ್ವದಲ್ಲಿ ನಮ್ಮ ದೇಶ ದೊಡ್ಡ ಪ್ರಜಾಪ್ರಭುತ್ವದ ದೇಶವಾಗಿ ಹೊರಹೊಮ್ಮಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿ.ಎಂ ಬೊಮ್ಮಾಯಿ
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಚುನಾವಣೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು, ಮತ ಚಲಾವಣೆ ಹಕ್ಕನ್ನು ಪಡೆದಿರುವ ಪ್ರತಿಯೊಬ್ಬ ಪ್ರಜೆಯು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
ವಿಶ್ವದಲ್ಲಿ ನಮ್ಮ ದೇಶ ದೊಡ್ಡ ಪ್ರಜಾಪ್ರಭುತ್ವದ ದೇಶವಾಗಿ ಹೊರಹೊಮ್ಮಿದೆ.
ನಮ್ಮ ದೇಶದ ಸಂವಿಧಾನದ ಪ್ರಕಾರ ಸರ್ಕಾರವನ್ನು ಆಯ್ಕೆ ಮಾಡುವ ಚುನಾವಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಮತ ಚಲಾವಣೆಯ ಹಕ್ಕನ್ನು ನೀಡಲಾಗಿದೆ.
ಮತದಾನ ಎಂಬುದು ನಮ್ಮ ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಸಂವಿಧಾನಾತ್ಮಕವಾಗಿ ದೊರೆತ ಹಕ್ಕಾಗಿದೆ.
ಪ್ರತಿಯೊಬ್ಬ ಅರ್ಹ ಮತದಾರರು ಮತ ಚಲಾವಣೆ ಮಾಡುವ ಮೂಲಕ ತಮ್ಮ ಕರ್ತವ್ಯ ಪಾಲನೆ ಮಾಡಬೇಕು ಎಂದು ತಿಳಿಸಿದರು.
ಭಾರತ ಚುನಾವಣಾ ಆಯೋಗ ದೇಶದ ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗದಂತೆ ಜಾಗೃತಿ ಮೂಡಿಸುತ್ತಿದೆ.
ವಿಶೇಷಚೇತನರು ಸಹ ಮತದಾನ ಮಾಡುವಂತೆ ಉತ್ತೇಜಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.
ಮುಂಬರುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರ ಮತ ಚಲಾವಣೆ ಮಾಡುವ ಕುರಿತು ಆಯೋಜಿಸಲಾಗಿರುವ ಈ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು.
ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾಡೂ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ
ಮನೋಜ್ ಕುಮಾರ್ ಮೀನಾ, ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್,
ಬೆಂಗಳೂರು ನಗರ ಜಿಲ್ಲಾಪಂಚಾಯತ್ ಸಿಇಓ ಸಂಗಪ್ಪ, ಉಪಕಾರ್ಯದರ್ಶಿ ನೋಮೇಶ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
Share your comments