ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಪ್ರದೇಶಗಳಿಗೆ ಆರೇಂಜ್ ಅಲರ್ಟ್ (orange alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
. ಕೊಡಗು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಿ ರೆಡ್ ಅಲರ್ಟ್ (Red alert) ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರ, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯೆತೆಯಿದ್ದು, ಈ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಆರೇಂಜ್ ಅಲರ್ಟ್ (Orange alert) ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜುಲೈ 9 ರಿಂದ 12ರವರೆಗೆ ಹಳದಿ ಅಲರ್ಟ್ (yellow alert) ಘೋಷಣೆ ಮಾಡಲಾಗಿದೆ.
ಈ ಮಧ್ಯೆ ಅರಬ್ಬಿ ಸಮುದ್ರದ ಆಗ್ನೆಯ ಭಾಗದಲ್ಲಿ ಮೈಲ್ಮೆ ಸುಳಿಗಾಳಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿರುವುದರಿಂದ ಜುಲೈ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.