1. ಸುದ್ದಿಗಳು

millets Fair ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳದಲ್ಲಿ ಹಲವು ವಿಶೇಷ

Hitesh
Hitesh
ಮೂರು ದಿನ ಅದ್ಧೂರಿ ಸಿರಿಧಾನ್ಯ ಮೇಳ

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ ಪರಿಚಯಿಸಿದೆ.

ಇಂದಿನ ಪ್ರಮುಖ ಸುದ್ದಿಗಳನ್ನು ನೋಡುವುದಾದರೆ,ಬೆಂಗಳೂರು ಸೇರಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಕರ್ನಾಟಕ ಆರು ಜಿಲ್ಲೆಗಳಲ್ಲಿ ಎರಡು

ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೈತರಿಗೆ 2 ಸಾವಿರ ರೂಪಾಯಿ ಕೂಡಲೇ ಕೊಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ಎಲ್ಲ ಸುದ್ದಿಗಳನ್ನು ನೋಡೋಣ ಮೊದಲಿಗೆ ಮುಖ್ಯಾಂಶಗಳು.


1. ಯುವಕರು ಜೇನುಕೃಷಿ ಮಾಡಿದರೆ ಭರ್ಜರಿ ಲಾಭ
2. ಕೃಷಿ ನೀರಾವರಿ ಪಂಪ್‌ಸೆಟ್‌ ಘಟಕ: ಗುಡ್‌ನ್ಯೂಸ್‌
3. ಇಂದಿನಿಂದ ರಾಜ್ಯದಲ್ಲಿ ಸಿರಿಧಾನ್ಯ ಮೇಳ
4. ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳದಲ್ಲಿ ಹಲವು ವಿಶೇಷ
5. ರೈತರಿಗೆ ಕೂಡಲೇ 2 ಸಾವಿರ ನೀಡಲು ಬಿಜೆಪಿ ಆಗ್ರಹ
6. ರಾಜ್ಯದ ವಿವಿಧೆಡೆ ಎರಡು ದಿನ ಭಾರೀ ಮಳೆ

ಸುದ್ದಿಗಳ ವಿವರ ಈ ರೀತಿ ಇದೆ.  

1. ಜೇನುಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಯುವಜನತೆಗೆ ಹೆಚ್ಚು ಉದ್ಯೋಗ ಅವಕಾಶ ಸೃಷ್ಟಿಸಿ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿಸಬೇಕು

ಎಂದು  ಸಂಸದ ಅನಂತಕುಮಾರ್ ಹೆಗಡೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
-----------------------
2. ಕರ್ನಾಟಕದಲ್ಲಿ ಕೃಷಿ ನೀರಾವರಿ ಪಂಪ್ ಸೆಟ್‌ಗಳಿಗೆ ನಿರಂತರ ವಿದ್ಯುತ್ ಪೂರೈಸುವ ಉದ್ದೇಶದಿಂದ ಪಿಎಂ ಕುಸುಮ್ ಯೋಜನೆಯಡಿ 400 ಸೌರ ವಿದ್ಯುತ್

ಘಟಕಗಳ ನಿರ್ಮಾಣಕ್ಕೆ ಬೇಕಾಗಿರುವ ಜಮೀನನ್ನು ಶೀಘ್ರ ಹಸ್ತಾಂತರ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ

ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 400 ವಿದ್ಯುತ್ ಉಪಕೇಂದ್ರಗಳ ಬಳಿ ಸೌರ ವಿದ್ಯುತ್ ಘಟಕಗಳನ್ನು ನಿರ್ಮಿಸಿ ಸಂಪರ್ಕ ಕಲ್ಪಿಸುವ ಬಗ್ಗೆ

ಅವರು ಸೂಚನೆ ನೀಡಿದ್ದಾರೆ. ಇನ್ನು ಈ ಸಂಬಂಧ ಮಾತನಾಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು 400 ಘಟಕಗಳ ನಿರ್ಮಾಣಕ್ಕೆ 3

ಸಾವಿರ ಎಕೆರೆ ಜಮೀನು ಅಗತ್ಯವಿದೆ. ಜಮೀನು ಹಸ್ತಾಂತರವಾದರೆ ಶೀಘ್ರ ಘಟಕ ನಿರ್ಮಿಸಲಾಗುವುದು ಎಂದಿದ್ದಾರೆ.  
-----------------------
3. ರಾಜ್ಯದಲ್ಲಿ ಸಿರಿಧಾನ್ಯಗಳ ಮಾರಾಟ ಹಾಗೂ ಉತ್ಪಾದನೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಸಿರಿಧಾನ್ಯಗಳ ಮೇಳವನ್ನು ಆಯೋಜಿಸಲಾಗಿದೆ.

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ

ಶುಕ್ರವಾರ ಅರಮನೆ ಮೈದಾನದಲ್ಲಿ ಉದ್ಘಾಟಿಸಲಿದ್ದಾರೆ.    

4. ಇಂದಿನಿಂದ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ  ಸಿರಿಧಾನ್ಯ ಮತ್ತು ವಾಣಿಜ್ಯ ಮೇಳ ನಡೆಯಲಿದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮೇಳದಲ್ಲಿ ಹಲವಾರು ಸಂಶೋಧನಾ ಸಂಸ್ಥೆಗಳು ಉತ್ಪನ್ನಗಳನ್ನು ಪ್ರದರ್ಶಿಸಲಿವೆ.

ಕೇಂದ್ರ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೇಳದಲ್ಲಿ 281 ಮಳಿಗೆಗಳನ್ನು ತೆರೆಯಲಾಗಿದೆ.

ಅಲ್ಲದೇ ರಾಜ್ಯದ ನವೋದ್ಯಮಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಉತ್ಪಾದಕರು ಹಾಗೂ ಗ್ರಾಹಕರು ಚರ್ಚೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಇನ್ನು ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಬೆಳೆಗಾರರಿಗಾಗಿ ಕನ್ನಡ ಭಾಷೆಯಲ್ಲಿ ಕಾರ್ಯಾಗಾರವನ್ನೂ ಸಹ ಆಯೋಜಿಸಲಾಗಿದೆ.

ಇದರೊಂದಿಗೆ ಮೇಳಕ್ಕೆ ಬರುವವರಿಗೆ ಸಿರಿಧಾನ್ಯಗಳ ಊಟ ಮತ್ತು ತಿಂಡಿ ಸಿಗಲಿದ್ದು, ಇದರ ಮಾರಾಟಕ್ಕೆ ಅವಕಾಶ ಇದೆ. 
-----------------------
5. ರೈತರಿಗೆ 2000 ಸಾವಿರ ರೂಪಾಯಿ ಶೀಘ್ರ ಕೊಡಿ.

ರಾಜ್ಯ ಸರ್ಕಾರ ಘೋಷಣೆ ಮಾಡಿರುವಂತೆ 2000 ಸಾವಿರ ರೂಪಾಯಿಯನ್ನು,

ಬರಪೀಡಿತ ತಾಲ್ಲೂಕಿನ ರೈತರಿಗೆ ಕೂಡಲೇ ನೀಡಬೇಕು

ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಅವರು ರೈತರ ಖಾತೆಗಳಿಗೆ 2 ಸಾವಿರ ರೂಪಾಯಿಗಳನ್ನು

ತಾತ್ಕಾಲಿಕ ಪರಿಹಾರವಾಗಿ ಘೋಷಿಸಿದ್ದಾರೆ. ಆದರೆ, ಇಲ್ಲಿಯ ವರೆಗೆ ಹಣ ನೀಡಿಲ್ಲ ಎಂದು ಆರೋಪಿಸಿದ್ದಾರೆ.
-----------------------
6. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ.

ಶುಕ್ರವಾರ ಹಾಗೂ ಶನಿವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ.

ಇನ್ನು ದಕ್ಷಿಣ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಮಂಡ್ಯ ಹಾಗೂ ಮೈಸೂರು

ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ

ಮಳೆಯಾಗಲಿದ್ದು, ಇಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಗುಡುಗು ಮುನ್ನೆಚ್ಚರಿಕೆ ಇನ್ನು ಎರಡು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
----------------------- 
7. ಗೊಂಬೆಗಳ ಉದ್ಯಮದಲ್ಲಿ ಭಾರತವು 9 ವರ್ಷಗಳಲ್ಲಿ  ಅದ್ಭುತವಾದ ಸಾಧನೆಯನ್ನು ಮಾಡಿದೆ.

ಆಟಿಕೆಗಳನ್ನು ರಫ್ತು ಮಾಡುವುದರಲ್ಲಿ ಶೇಕಡ 239 ಪ್ರತಿಶತ ಹೆಚ್ಚಳವಾಗಿದೆ.

ಈ ವಿಷಯವನ್ನು ಸಕ್ಸಸ್ ಸ್ಟೋರಿ ಆಫ್ ಮೇಡ್ ಇನ್ ಇಂಡಿಯಾ ಅಧ್ಯಯನದಲ್ಲಿ ಹೇಳಲಾಗಿದೆ.

ಇದೇ ಅವಧಿಯಲ್ಲಿ ಆಟಿಕೆಗಳ ಆಮದು ಮಾಡಿಕೊಳ್ಳುವುದು ಸಹ ಇಳಿಕೆಯಾಗಿದೆ ಎಂದಿದೆ ವರದಿ. 
---------------------- 
8. ವೈ.ಎಸ್.ಆರ್.ತೆಲಂಗಾಣ ಪಕ್ಷದ ನಾಯಕಿ ವೈ.ಎಸ್.ಶರ್ಮಿಳಾ ಅವರು ತಮ್ಮ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ಮುಖಂಡರ ಉಪಸ್ಥಿತಿಯಲ್ಲಿ ಪಕ್ಷ ವಿಲೀನ ನಡೆದಿದೆ.

ಈಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿಯೂ ವೈಎಸ್‌ ಶರ್ಮಿಳಾ ಅವರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು.

ವೈ.ಎಸ್.ಶರ್ಮಿಳಾ ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ ಅವರ ಪುತ್ರಿ ಹಾಗೂ ವೈ.ಎಸ್‌ ಜಗನ್‌ಮೋಹನ ರೆಡ್ಡಿ

ಅವರ ಸಹೋದರಿಯಾಗಿದ್ದಾರೆ
----------------------- 
9. ಚಿತ್ರಸಂತೆ ಮತ್ತೆ ಬಂದಿದ್ದು, ಚಿತ್ರಪ್ರಿಯರಿಗೆ ಸಂತಸ ತಂದಿದೆ. ಬೆಂಗಳೂರಿನ ಶಿವಾನಂದ ಸರ್ಕಲ್‌ನಿಂದ ವಿಂಡ್ಸರ್‌ಮ್ಯಾನರ್‌ವರೆಗಿನ ಕುಮಾರ ಕೃಪಾ

ರಸ್ತೆಯಲ್ಲಿ ಹಾಗೂ ಕ್ರೆಸೆಂಟ್‌ ರಸ್ತೆಯ ಸುತ್ತಮುತ್ತ ಕಲಾಕೃತಿಗಳ ಪ್ರದರ್ಶನ ಇದೇ 7ರಂದು ನಡೆಯಲಿದೆ.

ಇನ್ನು ಕ್ರೆಸೆಂಟ್‌ ರಸ್ತೆಯಲ್ಲಿ ಗಾಲ್ಫ್‌ ಕ್ಲಬ್‌ವರೆಗೆ, ರೇಸ್‌ಕೋರ್ಸ್‌ ರಸ್ತೆ ಹಾಗೂ ಬಿಡಿಎ

ಆವರಣ, ರೈಲ್ವೆ ಪ್ಯಾರಲಲ್‌ ರಸ್ತೆಗಳಲ್ಲಿ ವಾಹನ ನಿಲ್ಲಿಸಲು ಅವಕಾಶ ಕಲ್ಪಿಸಲಾಗಿದೆ
----------------------- 

Published On: 05 January 2024, 05:15 PM English Summary: Many specials at the International millets Fair

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.