1. ಸುದ್ದಿಗಳು

Today weather ಬ್ರಹ್ಮಾವರದಲ್ಲಿ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್‌: ಉಷ್ಣಾಂಶದ ಎಚ್ಚರಿಕೆ!

Hitesh
Hitesh
Maximum temperature in Brahmavar is 36.4 degrees Celsius: Heat Alert!

ರಾಜ್ಯದಲ್ಲಿ ಶುಕ್ರವಾರವೂ ಒಣಹವೆ ಮುಂದುವರಿದಿದ್ದು, ಕೆಲವು ಕಡೆಗಳಲ್ಲಿ ಬಿಸಿಲಿನ ಝಳ ಹೆಚ್ಚಳವಾಗಿರುವುದು ವರದಿ ಆಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಜನರನ್ನು ಹೈರಾಣಾಗಿಸಿದೆ.

ರಾಜ್ಯದಲ್ಲಿ ಅತೀ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್‌ ಉಡುಪಿಯ ಬ್ರಹ್ಮಾವರದಲ್ಲಿ ದಾಖಲಾಗಿದೆ.

ರಾಜ್ಯದಲ್ಲಿ ಅತೀ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ. 

Lokayukta Raid ರಾಜ್ಯದಲ್ಲಿ ಸಂಚಲ ಮೂಡಿಸಿದ ಬಿಜೆಪಿ ಪುತ್ರನ ಲಂಚ ಪ್ರಕರಣ: 14ದಿನ ನ್ಯಾಯಾಂಗ ಬಂಧನ!

ಇನ್ನು ಮುಂದಿನ 48 ಗಂಟೆಗಳ ಕಾಲ ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಷ್ಣಾಂಶದ ಎಚ್ಚರಿಕೆ ರಾಜ್ಯದಲ್ಲಿ ಕರಾವಳಿ ಸೇರಿದಂತೆ ಕೆಲವು ನಿರ್ದಿಷ್ಟ ಪ್ರದೇಶದಲ್ಲಿ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಉಷ್ಣಾಂಶದ ಎಚ್ಚರಿಕೆಯನ್ನು ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

Lokayukta Raid ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ: 6 ಕೋಟಿ ನಗದು ವಶ!

ಕನಿಷ್ಠ ಉಷ್ಣಾಂಶ: ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ ಮುಂದಿನ 24 ಗಂಟೆಗಳಲ್ಲಿ

ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ ಮುಂದಿನ 48 ಗಂಟೆಗಳಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಆಗಿರುವುದು ವರದಿ ಆಗಿಲ್ಲ.

ಅಲ್ಲಲ್ಲಿ ತಾಪಮಾನ ಹೆಚ್ಚಾಗಲಿದ್ದು, ಒಣಹವೆ ಮುಂದುವರಿಯಲಿದೆ.

ಮುಂದಿನ 24 ಗಂಟೆ: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಬದಲಾದ ಮೇಲ್ಮೇ ಗಾಳಿ ಬೀಸುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿವೆ.

Gold Rate Today ಶುಕ್ರವಾರವೂ ಚಿನ್ನ ಖರೀದಿದಾರರಿಗೆ ನಿರಾಸೆ, ಚಿನ್ನದ ಬೆಲೆ ಹೆಚ್ಚಳ!

Maximum temperature in Brahmavar is 36.4 degrees Celsius: Heat Alert!

ಮುಂದಿನ 48 ಗಂಟೆಗಳು:  ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ.

ಬದಲಾದ ಮೇಲ್ಮೇ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿವೆ

ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.  

ಬೆಂಗಳೂರಿನಲ್ಲಿ ಕಸ ನಿರ್ವಹಣೆ ಸಂಸ್ಥೆಗೆ 700 ಕೋಟಿ ರೂ. ಅನುದಾನ!

Published On: 03 March 2023, 02:07 PM English Summary: Maximum temperature in Brahmavar is 36.4 degrees Celsius: Heat Alert!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.