ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು 2021ರ ಮೇ 15 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಅರ್ಜಿ ಸಲ್ಲಿಕೆ ಅಂತಿಮ ದಿನಾಂಕವನ್ನು ದಿನಾಂಕ: 30-04-2021 ನಿಗದಿಪಡಿಸಲಾಗಿತ್ತು. ಕೆಲವೊಂದು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೋಂದಣಿ ಸಂಖ್ಯೆಯನ್ನು ನೀಡದೇ ಇರುವ ಪ್ರಯುಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ ಹಾಗೂ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಿನಾಂಕ:12.05.2021ರ ವರೆಗೆ ಕೊರೋನಾ ಕರ್ಫ್ಯೂ ಘೋಷಣೆಯಾಗಿರುವ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಇಲಾಖೆಯ www.ssp.postmatric.karnataka.gov.in ವೆಬ್‌ಸೈಟ್‌ನಲ್ಲಿ 2021ರ ಮೇ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ www.bcwd.karnataka.gov.in,ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004ಗಳಿಗೆ, ಇ-ಮೇಲ್: [email protected] ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: [email protected]ಮತ್ತು ದೂರವಾಣಿ ಸಂಖ್ಯೆ 080-35254757 ಗೆ ಸಂಪರ್ಕಿಸಬೇಕೆAದು ಅವರು ತಿಳಿಸಿದ್ದಾರೆ.
Share your comments