1. ಸುದ್ದಿಗಳು

ರಸಗೊಬ್ಬರ ದರ ಹೆಚ್ಚಳ ಹಿನ್ನೆಲೆ: ರಸಗೊಬ್ಬರ ಖಾತೆ ಸಚಿವರೊಂದಿಗೆ ಸಭೆ ನಡೆಸಿ ಪರಿಹಾರಕ್ಕೆ ಪ್ರಯತ್ನ-ಬಿ.ಸಿ.ಪಾಟೀಲ್

B.C patil

ಪ್ರತಿ ಕ್ವಿಂಟಾಲ್ ರಸಗೊಬ್ಬರ ದರ ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಲಿದ್ದು, ಅದರಲ್ಲಿ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಅವರು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಸಗೊಬ್ಬರ ಉತ್ಪಾದನೆಗೆ ಬೇಕಾಗುವ ಫಾಸ್ಪರಿಕ್ ಆ್ಯಸಿಡ್ ದರ ಪ್ರತಿ ಬ್ಯಾರೆಲ್‍ಗೆ 400 ದಿಂದ 700 ಡಾಲರ್‍ಗೆ ಹೆಚ್ಚಳ ಮತ್ತು ಆಫ್ರಿಕಾ ಸೇರಿದಂತೆ ಪಾಶ್ಚಿಮಾತ್ಯ ದೇಶದಿಂದ ಅಮದಾಗುವ ಕಚ್ಚಾವಸ್ತುಗಳ ದರ ದಿಢೀರ ಹೆಚ್ಚಳಗೊಂಡ ಕಾರಣ ದೇಶದಲ್ಲಿ ರಸಗೊಬ್ಬರ ದರ ಹೆಚ್ಚಳವಾಗಿದೆ. ಡಿ.ವಿ.ಸದಾನಂದ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಇದಕ್ಕೆ ಪರಿಹಾರ ನೀಡುವ ಭರವಸೆ ಇದೆÉ ಎಂದರು.

ಕಲಬುರಗಿ ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 7.55 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಪ್ರಮುಖ ಬೆಳೆಗಳಾದ ತೊಗರಿ, ಹತ್ತೀ, ಹೆಸರು, ಉದ್ದು ಸೇರಿದಂತೆ ಇತರೆ ಬೆಳೆಗಳ ಬಿತ್ತನೆಯ ಗುರಿ ಹೊಂದಿದೆ. ಇದಕ್ಕಾಗಿ 46559 ಕ್ವಿಂಟಾಲ್ ಬೀಜದ ಬೇಡಿಕೆಯಿದ್ದು, ದಾಸ್ತಾನು ಪ್ರಕ್ರಿಯೆ ನಡೆಯುತ್ತಿದೆ. ಇದರ ಜೊತೆಗೆ 1,19,395 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿದ್ದು, ಇದರ ದಾಸ್ತಾನಿಗೂ ಕ್ರಮ ವಹಿಸಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 2.81 ಲಕ್ಷ ರೈತರು ನೋಂದಣಿಯಾಗಿದ್ದು, 2019-20ನೇ ಸಾಲಿನಿಂದ ಇಲ್ಲಿಯವರೆಗೆ 2.62 ಲಕ್ಷ ರೈತರಿಗೆ 457.89 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2020-21ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ 38,653 ರೈತೆರು ನೋಂದಣಿಯಾಗಿದ್ದಾರೆ. ಸ್ಥಳೀಯ ವಿಪತ್ತಿನಡಿ 13,909 ರೈತರು ವಿಮಾ ಪರಿಹಾರಕ್ಕೆ ಕೋರಿದ್ದು, ಇಲ್ಲಿಯವರೆಗೆ 6,248 ರೈತರಿಗೆ 6.89 ಕೋಟಿ ರೂ. ಪರಿಹಾರ ನೀಡಿದೆ. ಉಳಿದ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಸಹ ಜಾರಿಯಲ್ಲಿದೆ ಎಂದರು.

ನೀರಿನ ಸದ್ಬಳಕೆಯನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಪ್ರಾಯೋಜಕತ್ವದಲ್ಲಿ ಶೇ.90 ರಷ್ಟು ರಿಯಾಯಿತಿಯೊಂದಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನಕ್ಕಾಗಿ 2020-21ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 21.87 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ ಮಾರ್ಚ್ ಅಂತ್ಯದ ವರೆಗೆ 21.9 ಕೋಟಿ ವೆಚ್ಚ ಮಾಡಿ 10,175 ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಅಳವಡಿಸಿದೆ ಎಂದರು.

ಬಿಸಿಯೂಟದಲ್ಲಿ ಸಿರಿಧಾನ್ಯ ಸೇರ್ಪಡೆ: ಶಾಲಾ ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿ ಊಟದಲ್ಲಿ ಸಿರಿಧಾನ್ಯಗಳಾದ ನವಣೆ, ರಾಗಿ, ತೊಗರಿ ನೀಡಲು ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ ನಡೆದಿದ್ದು, ಮುಂದಿನ ದಿನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

Published On: 11 April 2021, 01:36 PM English Summary: Meeting with Minister of Fertilizers to try to resolve solution- BC Patil

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.