1. ಸುದ್ದಿಗಳು

ಮೆಗಾ ಡೈರಿ ಉದ್ಘಾಟನಾ ಕಾರ್ಯಕ್ರಮ: ಎಥನಾಲ್ ಘಟಕ ಸ್ಥಾಪನೆಗೆ ಸಿಎಂ ಯೋಜನೆ

Kalmesh T
Kalmesh T
Mega Dairy Inauguration Program: CM plans to set up ethanol plant

ಮೈ ಶುಗರ್ ನಲ್ಲಿ  ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಗುಡ್‌ನ್ಯೂಸ್‌: ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ– ಸಿಎಂ ಬಸವರಾಜ ಬೊಮ್ಮಾಯಿ

ಅವರು ಇಂದು ಮಂಡ್ಯ ಜಿಲ್ಲೆ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಮಂಡ್ಯ ಮದ್ದೂರಿನ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ  ಮೆಗಾ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ  ಹಸಿರು ಕ್ರಾಂತಿಯ ನಂತರ ಕ್ಷೀರ  ಕ್ರಾಂತಿಯಾಗುತ್ತಿದೆ. ಕರ್ನಾಟಕ  ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತ ಬಂಧುಗಳು  ಶ್ರಮಿಸುತ್ತಿದ್ದಾರೆ.  ಹಾಲು ಉತ್ಪಾದನೆ ಮಾಡುವ ರೈತ ಮಹಿಳೆಯರಿಗೆ ವಿಶೇಷವಾಗಿ ಮುಖ್ಯ ಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ನಿಧನ! ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರ ಸಂತಾಪ ಸೂಚನೆ

1 ಲಕ್ಷ ಲೀಟರ್‌ ಹಾಲು ಸಂಸ್ಕರಿಸುವ ಸಾಮರ್ಥ್ಯ

ಸಮಗ್ರ ಕೃಷಿಯಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಅದಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕರ್ನಾಟಕದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲದಲ್ಲಿ ಪ್ರೋತ್ಸಾಹ ಧನ ನೀಡುವುದು ಪ್ರಾರಂಭವಾಗಿ ಇಂದು 5.00 ರೂ.ಗಳನ್ನು ಪ್ರತಿ ಹಾಲು ಉತ್ಪಾದಕನಿಗೆ ನೀಡಲಾಗುತ್ತಿದೆ.

ಈ ಕ್ಷೇತ್ರದಲ್ಲಿ ತನ್ನದೇ ಆದ ಸವಾಲುಗಳಿದ್ದರೂ  ಇಂದು ಅದನ್ನು ಸರಿದೂಗಿಸಿ  ಮುನ್ನುಗ್ಗುತ್ತಿದೆ.  ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ 1 ಲಕ್ಷ ಲೀ. ಹಾಲು ಸಂಸ್ಕರಣೆ ಮಾಡುವ ಸಾಮರ್ಥ್ಯವಿದೆ ಎಂದರು.

ಮೆಗಾ ಡೈರಿಯಲ್ಲಿ ಸ್ವಾವಲಂಬಿ ವ್ಯವಸ್ಥೆ

ರೈತನ ಬದುಕು ಅನಿಶ್ಚಿತತೆಯಿಂದ ಕೂಡಿರುವ ಈ ಸಂದರ್ಭದಲ್ಲಿ ಅವನ ಬದುಕಿಗೆ ನಿಶ್ಚಿತತೆ ತಂದುಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷಿ ಇಲಾಖೆಯಿಂದ ಸಹಕಾರವನ್ನು ಬೇರ್ಪಡಿಸಿ, ಸಹಕಾರ ಇಲಾಖೆ ಸೃಜಿಸಿ ಭಾರತ ದೇಶದಲ್ಲಿ ಸಹಕಾರ ರಂಗಕ್ಕೆ ಶಕ್ತಿ ತುಂಬಿದ್ದು, ಇದರಿಂದ ಒಂದು  ಕ್ರಾಂತಿಯಾಗಲಿದೆ.

ಹಲವಾರು ಸುಧಾರಣೆಗಳನ್ನು ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರದ್ದು  ಬೆಂಗಳೂರಿನ ಪ್ರಥಮ ಮೆಗಾ ಡೈರಿ ಸ್ಥಾಪನೆಯಲ್ಲಿ ಮಹತ್ವದ ಪಾತ್ರವಿದೆ. ಅದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಅಲ್ಲಿಂದ ಪ್ರಾರಂಭವಾದ ಮೆಗಾ ಡೈರಿ ಇಂದು ಎಲ್ಲೆಡೆ ಸ್ಥಾಪನೆಯಾಗುತ್ತಿದೆ.  ಸ್ವತಂತ್ರವಾಗಿ ಹಾಲು ಉತ್ಪಾದಿಸಿ, ಸಂಸ್ಕರಿಸಿ, ಪ್ಯಾಕ್ ಮಾಡಿ, ವಿವಿಧ ಪದಾರ್ಥಗಳನ್ನು ತಯಾರಿಸಿ ಸ್ವಾವಲಂಬನೆಯ ವ್ಯವಸ್ಥೆ ಮೆಗಾ ಡೈರಿಯಲ್ಲಿ ಆಗುತ್ತಿದೆ. ನಮ್ಮ ಪ್ರಧಾನಮಂತ್ರಿಗಳ ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ ಎಂದರು.

ಸರ್ಕಾರದ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ದೊರೆಯಲಿದೆ ಬರೋಬ್ಬರಿ 2 ಲಕ್ಷ ಮಾಸಿಕ ಪಿಂಚಣಿ!

ರೈತರ ಯೋಜನೆಗಳಿಗೆ ಒಂದು ವಾರದೊಳಗೆ ಅನುಮೋದನೆ

ಮಂಡ್ಯ ಜಿಲ್ಲೆ ಒಕ್ಕಲುತನದಿಂದ ಕೂಡಿದೆ. ಸಕ್ಕರೆ ನಾಡು, ಭತ್ತದ ಖನಿಜ. ಮಂಡ್ಯದ ಅಭಿವೃದ್ಧಿಗೆ  ಇನ್ನಷ್ಟು ನೀರಾವರಿ ಮತ್ತು ಕೈಗಾರಿಕೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೈ ಶುಗರ್ ಸಂಸ್ಥೆಯನ್ನು  ಸರ್ಕಾರಿ ವಲಯದ ಮೂಲಕ ಪ್ರಾರಂಭಿಸಿದೆ. 

ವಿಶ್ವೇಶ್ವರ ನಾಲೆಯ  ನೀರಾವರಿಯ ಕೊನೆ ಭಾಗದಲ್ಲಿರುವ ರೈತರಿಗೆ ಯೋಜನೆಗಳನ್ನು ರೂಪಿಸುತ್ತಿದ್ದು, ಒಂದು ವಾರದಲ್ಲಿ  ಅವೆಲ್ಲಕ್ಕೂ ಅನುಮೋದನೆ ನೀಡಲಾಗುವುದು ಎಂದರು.

Published On: 30 December 2022, 03:06 PM English Summary: Mega Dairy Inauguration Program: CM plans to set up ethanol plant

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.