1. ಸುದ್ದಿಗಳು

ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಲು ಆಗಸ್ಟ್ 14 ರಂದು “ಮೆಗಾ ಲೋಕ್ ಅದಾಲತ್”

ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಮತ್ತು ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು 2021ರ ಆಗಸ್ಟ್ 14 ರಂದು ರಾಷ್ಟç ಮಟ್ಟಕ್ಕೆ ಸಂಬAಧಿಸಿದAತೆ ‘ಮೆಗಾ ಲೋಕ್ ಅದಾಲತ್’ ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ  ಕೆ. ಸುಬ್ರಮಣ್ಯ ಅವರು ತಿಳಿಸಿದರು.

ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಎ.ಡಿ.ಆರ್.ಕಟ್ಟಡದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆಗಸ್ಟ್ 14 ರಂದು ಕಲಬುರಗಿ ಜಿಲ್ಲಾ ನ್ಯಾಯಾಲಯ ಸೇರಿದಂತೆ ಆಳಂದ, ಅಫಜಲಪೂರ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ ಮತ್ತು ಸೇಡಂ ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಸಹ “ಮೆಗಾ ಲೋಕ್ ಅದಾಲತ್’ ನಡೆಯಲಿದೆ ಎಂದು ಅವರು ವಿವರಿಸಿದರು.

ಈ ‘ಮೆಗಾ ಲೋಕ್ ಅದಾಲತ್’ನಲ್ಲಿ ನ್ಯಾಯಾಲಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣಿಸಿ ಇತ್ಯರ್ಥಕ್ಕೆ ಪರಿಗಣಿಸಲಾಗುವುದು. ಇದಲ್ಲದೆ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರ, ಅಸಲು ದಾವೆಗಳು, ಬ್ಯಾಂಕ್‌ಗಳಿಗೆ ಸಂಬAಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಂಶ, ಕಾನೂನಿನ್ವಯ ರಾಜೀ ಆಗಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್ ಪ್ರಕರಣಗಳನ್ನು ಸಹ ಇತ್ಯಾರ್ಥಗೊಳಿಸಿ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.

ಲೋಕ್ ಅದಾಲತ್ ದಿನದಂದು ಆನ್‌ಲೈನ್, ವಿಡಿಯೋ ಕಾನ್ಫೆರೆನ್ಸ್, ಇ-ಮೇಲ್, ಎಸ್.ಎಮ್.ಎಸ್.,  ವ್ಯಾಟ್ಸಪ್, ಎಲೆಕ್ಟ್ರಾನಿಕ್ ಮೋಡ್ ಅಥವಾ ಖುದ್ದಾಗಿ ಮೆಗಾ ಲೋಕ್ ಅದಾಲತ್‌ನಲ್ಲಿ ಹಾಜರಾಗುವ ಮೂಲಕ ಕಕ್ಷಿದಾರರು ಪ್ರಕರಣಗಳನ್ನು ಇತ್ಯಾರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ನ್ಯಾಯಾಧೀಶ ಕೆ.ಸುಬ್ರಮಣ್ಯ ತಿಳಿಸಿದರು.

ಈ ಕುರಿತು ಹೆಚ್ಚಿನ ವಿವರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ. ನ್ಯಾಯವಾದಿಗಳು ಮತ್ತು ಕಕ್ಷಿದಾರರು ಈ ಮೆಗಾ ಲೋಕ್ ಅದಾಲತ್ ಸುಸೂತ್ರವಾಗಿ ನಡೆಯಲು ಸಹಕಾರ ನೀಡಬೇಕು ಎಂದು ಅವರು ಕೋರಿದರು.  ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಎಂ. ಚೌಗಲೆ ಉಪಸ್ಥಿತರಿದ್ದರು.

Published On: 16 July 2021, 05:40 PM English Summary: Mega lok adalat

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2023 Krishi Jagran Media Group. All Rights Reserved.