News

ನೀರಾವರಿ ಸೌಲಭ್ಯ ಒದಗಿಸಲು74 ಸಾವಿರ ಕೋಟಿ ರೂ. ವೆಚ್ಚದ 28 ನೀರಾವರಿ ಯೋಜನೆಗಳಿಗೆ ಮಂಜೂರಾತಿ-ಸಿಎಂ

21 August, 2020 10:06 PM IST By:

ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು74 ಸಾವಿರ ಕೋಟಿ ರೂ. ವೆಚ್ಚದ 28 ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಅವರು ಕೆ.ಆರ್.ಎಸ್. ಜಲಾಶಯದಲ್ಲಿ ಬಾಗಿನ ಅರ್ಪಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ರಾಜ್ಯದ ಎಲ್ಲಾ ಜಲಾಶಯಗಳೂ ತುಂಬಿ ತುಳುಕುತ್ತಿವೆ. ಅಂತರ್ಜಲ ಕುಸಿಯುವದು ತಪ್ಪಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಉತ್ತಮ ಮಳೆಯಾಗಿದೆ. ಪ್ರತಿ ವರ್ಷ ಇದೇ ರೀತಿ ಮಳೆ-ಬೆಳೆಯಾಗಲಿ ಎಂದ ಅವರು, ಮಂಡ್ಯ ಜಿಲ್ಲೆಗಳ ಅಚ್ಚುಕಟ್ಟು ಕಾಲುವೆಗಳ ಅಭಿವೃದ್ಧಿಯನ್ನು ಮಾಡಲಾಗಿದೆ. ರಾಜ್ಯ ಸರ್ಕಾರ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ಬದ್ದವಾಗಿದ್ದು, ಅದರಂತೆ ಏತ ನೀರಾವರಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಮೇಕೆದಾಟು ಯೋಜನೆಗೂ ಕೇಂದ್ರ ಸರ್ಕಾರದಿಂದ ಎಲ್ಲ ಅನುಮತಿ ಪಡೆದುಕೊಂಡು ಈ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೀರಾವರಿ ಸೌಕರ್ಯ ಒದಗಿಸುವ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದರು.

ಮೇಕೆದಾಟುಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರದ ಮನವೊಲಿಸಿ ಯೋಜನೆಗೆ ವಿಶೇಷ ಅನುಮೋದನೆ ಪಡೆಯಲಾಗುವುದು ಎಂದರು.