News

ರಾಜ್ಯದಲ್ಲಿ ಮೇಲ್ಮೈ ಬಿಸಿಗಾಳಿ ಹವಾಮಾನ ಇಲಾಖೆ ಎಚ್ಚರಿಕೆ

07 March, 2023 12:08 PM IST By: Hitesh
Meteorological department warns of surface heat wave in the state

ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಮೇಲ್ಮೈ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಮಾರ್ಚ್‌ ಪ್ರಾರಂಭದಲ್ಲಿಯೇ ಬಿಸಿಲು ಹೆಚ್ಚಳವಾಗಿದ್ದು, ಜನರನ್ನು ಹೈರಾಣಾಗಿಸಿದೆ.

ಬಿಸಿಲಿನ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ.

ಇನ್ನು ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಬಿಸಿಲಿನ ಝಳ ಹೆಚ್ಚಳವಾಗಿದೆ.

ನಂದಿನಿ ಉತ್ಪನ್ನದ ಮೇಲೆ ಹಿಂದಿ ಹೆಸರು, ಸಾಮಾಜಿಕ ಮಾಧ್ಯಮದಲ್ಲಿ ವಿರೋಧ

ರಾಜ್ಯದಲ್ಲಿಯೇ ಅತೀ ಗರಿಷ್ಠ ಉಷ್ಣಾಂಶ 38.02 ಡಿಗ್ರಿ ಸೆಲ್ಸಿಯಸ್‌ ಪಣಂಬೂರಿನಲ್ಲಿ ದಾಖಲಾಗಿದೆ.

ಇನ್ನು ರಾಜ್ಯದಲ್ಲಿ ಅತೀ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ.

ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಬಹಷ್ಟು ಸಾಧ್ಯತೆಗಳಿವೆ.

ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.  

ಮುಖ್ಯಮಂತ್ರಿ ಕಾಫಿ, ತಿಂಡಿಗೆ 200 ಕೋಟಿ ರೂಪಾಯಿ ಖರ್ಚು, ಏನಿದು ಚರ್ಚೆ ?

ಇನ್ನು ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಒಳನಾಡಿನಲ್ಲಿ ಬಿಸಿಲಿನ ಪ್ರಮಾಣವು 3ರಿಂದ 4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ನಿರ್ಮಲ ಆಕಾಶವಿದ್ದು, ಬಲವಾದ ಮೇಲ್ಮೇ ಗಾಳಿ ಬೀಸುವ ಸಾಧ್ಯತೆ ಇದೆ.

ಇನ್ನು ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 17 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Char Dham Yatra ಚಾರ್ ಧಾಮ್ ಯಾತ್ರಾರ್ಥಿಗಳಿಗೆ ಆರೋಗ್ಯ ಸೇವೆ

Meteorological department warns of surface heat wave in the state

ಮೇಲ್ಮೈ ಸುಳಿಗಾಳಿಯ ಎಚ್ಚರಿಕೆ

ರಾಜ್ಯದಾದ್ಯಂತ ಹವಾಮಾನದಲ್ಲಿ ಬದಲಾವಣೆಗಳು ಕಂಡಬರುತ್ತಿದ್ದು, ಬಿಸಿಲಿನ ತಾಪಮಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಅಲ್ಲದೇ ಕಾಡ್ಗಿಚ್ಚು ಹೆಚ್ಚಾಗುತ್ತಿತ್ತು. ಹಲವು ಅರಣ್ಯ ಪ್ರದೇಶದಲ್ಲಿ ಈಗಾಗಲೇ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ನಾಶ ಹಾಗೂ ವನ್ಯ ಜೀವಿಗಳು ಮೃತಪಟ್ಟಿರುವುದು ವರದಿ ಆಗಿದೆ.

ಇದೇ ಸಂದರ್ಭದಲ್ಲಿ ಬಿಸಿಲಿನ ತಾಪಮಾನ ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಕಡೆಗಳಲ್ಲಿ 35 ಕಿ.ಮೀ ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿದ್ದು, ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿ.ಎಂ ಬೊಮ್ಮಾಯಿ

ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 17 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ.

ಇನ್ನು ಮುಂದಿನ 48 ಗಂಟೆಗಳಲ್ಲಿ ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿದ್ದು, ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.   

ಕೇಂದ್ರ ಸರ್ಕಾರದಿಂದ ಕೃಷಿಕರಿಗೆ ಸಿಹಿಸುದ್ದಿ: ನ್ಯಾನೊ ಲಿಕ್ವಿಡ್‌ ಡಿಎಪಿ ರಸಗೊಬ್ಬರ ಪರಿಚಯ!