News

Breaking: ಟೀ, ಕಾಫಿ ಪ್ರಿಯರಿಗೆ ಮತ್ತೆ ಹಾಲಿನ ಶಾಕ್..ಮೇ 1ರಿಂದ ದರದಲ್ಲಿ ಹೆಚ್ಚಳ ಸಾಧ್ಯತೆ

27 April, 2022 12:32 PM IST By: Maltesh
ಸಾಂದರ್ಭಿಕ ಚಿತ್ರ

ಪೆಟ್ರೋಲ್ , ಡಿಸೇಲ್ ಆಯ್ತು ಕರೆಂಟ್ ಬೆಲ್ ಕೂಡ ಏರಿಕೆ ಆಯ್ತು ಇದೀಗ ಹಾಲಿನ ಸರದಿ, KMF ಹಾಲು ಒಕ್ಕೂಟ  ಸಂಘಗಳು ಇದೀಗ ಬೆಲೆ ಏರಿಕೆಗೆ (Price Hike) ರಾಜ್ಯ ಸರ್ಕಾರಕ್ಕೆ  ಪ್ರಸ್ತಾವನೆ ಸಲ್ಲಿಸಿದ್ದಾರೆ. 

KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ KMF ಹಾಲಿನ ಬೆಲೆ ಏರಿಕೆ ಸಂಬಂಧ ಪ್ರಸ್ತಾವನೆ ಸಲ್ಲಿಸಿ ಮನವಿ ಸಲ್ಲಿಸಿದ್ದಾರೆ.  ಬಾಲಚಂದ್ರ ಜಾರಕಿಹೊಳಿ ಮನವಿ ಸ್ವೀಕರಿಸಿದ ಸಿಎಂ ಬೊಮ್ಮಾಯಿ ಇನ್ನು ಎರಡು ದಿನಗಳಲ್ಲಿ ಹಾಲಿನ ದರ ಏರಿಕೆ ಅಥವಾ ಯಥಾಸ್ಥಿತಿ ಕುರಿತು ಅಧಿಕೃತ ಮಾಹಿತಿ ನೀಡೋದಾಗಿ ತಿಳಿಸಿದ್ದಾರೆ.

ಪಿಎಂ ಕಿಸಾನ್: 11ನೇ ಕಂತು ಶೀಘ್ರದಲ್ಲೆ ಬಿಡುಗಡೆ! ಫಲಾನುಭವಿಗಳ ಪಟ್ಟಿಯಲ್ಲಿ ಈಗಲೇ ನಿಮ್ಮ ಹೆಸರು ಪರಿಶೀಲಿಸಿ

7th Pay Commision: ಈ ತಿಂಗಳ ಅಂತ್ಯದೊಳಗೆ ಹೆಚ್ಚುತ್ತಾ ಕೇಂದ್ರ ಸರ್ಕಾರಿ ನೌಕರರ HRA..?

ಅಮೂಲ್‌ ಸೇರಿದಂತೆ ದೇಶದ ವಿವಿಧ ಸಹಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಲಿನ ಮಾರಾಟ ದರವನ್ನು ಹೆಚ್ಚಿಸಿವೆ. ನಂದಿನಿ ಹಾಲಿನ ಮಾರಾಟ ದರಕ್ಕೆ ಹೋಲಿಕೆ ಮಾಡಿದರೆ ಇತರೆ ಸಂಸ್ಥೆಗಳ ದರವು ಪ್ರತಿ ಲೀಟರ್‌ಗೆ 8ರಿಂದ 10 ರು. ಹೆಚ್ಚಿದೆ. ಹೀಗಾಗಿ ನಂದಿನಿ ಹಾಲಿನ ಮಾರಾಟ ದರವನ್ನು ಕನಿಷ್ಠ ಪ್ರತಿ ಲೀಟರ್‌ಗೆ 3 ರು. ಹೆಚ್ಚಿಸಲು ಕ್ರಮಕೈಗೊಳ್ಳಬೇಕು. ಇದರಿಂದ ಹಾಲು ಉತ್ಪಾದಕರಿಗೆ ಕನಿಷ್ಠ 2 ರು. ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಹಾಗೂ ಹಾಲು ಮಾರಾಟಗಾರರಿಗೆ 1 ರು. ನೀಡಲು ಸಹಕಾರಿಯಾಗಲಿದೆ ಎಂದು ಪತ್ರ ಬರೆದು ಮುಖ್ಯಮಂತ್ರಿಯವರನ್ನು ಕೋರಿದ್ದಾರೆ.

ವಿದ್ಯುತ್ ದರ ಏರಿಕೆಯಾದ ಬೆನ್ನಲ್ಲೆ ಹಾಲಿನ ದರವೂ ಏರಿಕೆಯಾಗುವ ಸಾಧ್ಯತೆಗಳಿದ್ದು, ಪ್ರತಿ ಲೀಟರ್ ಹಾಲಿನ ದರವನ್ನು 3 ರೂ. ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿವೆ. ಆದರೆ, ಸರ್ಕಾರ ೫ ರೂ. ದರ ಏರಿಕೆಗೆ ಒಪ್ಪುವ ಸಾಧ್ಯತೆಗಳು ಕಡಿಮೆ ಇದ್ದು, ಹಾಲಿನ ಬೆಲೆ ಲೀಟರ್‌ಗೆ ಕನಿಷ್ಠ ೨ ರೂ. ಹೆಚ್ಚಳವಾಗುವುದು ಬಹುತೇಕ ಖಚಿತವಾಗಿದೆ.

ಪಿಎಂ ಕಿಸಾನ್: 11ನೇ ಕಂತು ಶೀಘ್ರದಲ್ಲೆ ಬಿಡುಗಡೆ! ಫಲಾನುಭವಿಗಳ ಪಟ್ಟಿಯಲ್ಲಿ ಈಗಲೇ ನಿಮ್ಮ ಹೆಸರು ಪರಿಶೀಲಿಸಿ

7th Pay Commision: ಈ ತಿಂಗಳ ಅಂತ್ಯದೊಳಗೆ ಹೆಚ್ಚುತ್ತಾ ಕೇಂದ್ರ ಸರ್ಕಾರಿ ನೌಕರರ HRA..?

ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಕಳೆದ ೩-೪ ತಿಂಗಳಿಂದ ಕೆಎಂಎಫ್ ಸರ್ಕಾರದ ಒಪ್ಪಿಗೆ ಪಡೆಯಲು ಪ್ರಯತ್ನ ನಡೆಸಿತ್ತಾದರೂ ಸರ್ಕಾರ ದರ ಏರಿಕೆಗೆ ಒಪ್ಪಿರಲಿಲ್ಲ. ಆದರೆ, ವಿದ್ಯುತ್ ದರ ಏರಿಕೆಯಾದ ಬೆನ್ನಲ್ಲೆ ಹಾಲಿನ ದರವನ್ನೂ ಏರಿಕೆ ಮಾಡಬೇಕೆಂದು ಮನವಿ ಮಾಡಿವೆ.

#Recruitment-ಕೃಷಿ ಸಚಿವಾಲಯ ನೇಮಕಾತಿ; 68,000 ಸಂಬಳ!

ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆ ಅಮೂಲ್‌ನಲ್ಲಿ ಭಾರೀ ನೇಮಕಾತಿ..ಪದವಿ ಹೊಂದಿದವರಿಗೆ ಭರ್ಜರಿ ಅವಕಾಶ