ಕಳಪೆ ಗುಣಮಟ್ಟದ ಗೊಬ್ಬರವನ್ನು ಮಾರಾಟ ಮಾಡಿದ್ದಲ್ಲಿ, ಅಂತವರನ್ನು ಪತ್ತೆ ಹಚ್ಚಿ ಪೊಲೀಸ್ ಕೇಸ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಖಡಕ್ ಸೂಚನೆ ನೀಡಿದರು.
ಇದನ್ನೂ ಓದಿರಿ: IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!
ಮುಂಗಾರು ಹಂಗಾಮಿಗೆ ಒಟ್ಟು 1,17,360 ಮೆಟ್ರಿಕ್ ಟನ್‌ನಷ್ಟು ರಸಗೊಬ್ಬರದ ಅವಶ್ಯಕತೆಯಿದ್ದು, ಜಿಲ್ಲೆಯಲ್ಲಿ ಪ್ರಸ್ತುತ 25,701 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುತ್ತದೆ. 3,90,210 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದೆ.
ಪ್ರಮುಖ ಬೆಳೆಗಳಾದ ಭತ್ತ- 87,000, ತೊಗರಿ- 96,000, ಹೆಸರು - 26010, ಹತ್ತಿ - 1,66,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಬೆಳೆಗಳಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
ಪ್ರಸಕ್ತ ವರ್ಷ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸ ಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ಒದಗಿಸಬೇಕು ಎಂದು ಸೂಚಿಸಿದರು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಜಾಗೃತ ದಳದ ಅಧಿಕಾರಿಗಳು ಎಲ್ಲ ರಸಗೊಬ್ಬರ ಮಳಿಗೆಗಳನ್ನು ತಪಾಸಣೆ ಮಾಡಬೇಕು. ತಪ್ಪಿತಸ್ಥ ಮಾರಾಟಗಾರರು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಯಾದಗಿರಿ ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ವಿತರಣೆ ಕುರಿತಂತೆ ಪರಾಮರ್ಷಿಸಲು ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಯಾದಗಿರಿ ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ಈ ಸಂದರ್ಭದಲ್ಲಿ ಧೈರ್ಯ ತುಂಬಿದರು.
ಗೋಧಿ ರಫ್ತು ನಿರ್ಬಂಧ ಆಹಾರದ ಬೆಲೆ ನಿಯಂತ್ರಿಸುತ್ತದೆ: ಭಾರತ ಸರ್ಕಾರ!
IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!
ಮುಂಗಾರು ಹಂಗಾಮಿಗೆ ಒಟ್ಟು 1,17,360 ಮೆಟ್ರಿಕ್ ಟನ್‌ನಷ್ಟು ರಸಗೊಬ್ಬರದ ಅವಶ್ಯಕತೆಯಿದ್ದು, ಜಿಲ್ಲೆಯಲ್ಲಿ ಪ್ರಸ್ತುತ 25,701 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುತ್ತದೆ. 3,90,210 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಪ್ರಮುಖ ಬೆಳೆಗಳಾದ ಭತ್ತ - 87,000, ತೊಗರಿ - 96,000, ಹೆಸರು - 26010, ಹತ್ತಿ - 1,66,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.
ಈ ಬೆಳೆಗಳಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
3ನೇ ಮಗುವಿಗೆ ಜನ್ಮ ನೀಡಿದರೆ 11 ಲಕ್ಷ ರೂಪಾಯಿ ಬೋನಸ್ ನೀಡತ್ತೆ ಈ ಕಂಪನಿ.. ಜೊತೆಗೆ 1 ವರ್ಷ ರಜೆ! ಏನಿದು Policy?