1. ಸುದ್ದಿಗಳು

#MissIndia: ಕರ್ನಾಟಕದ ಸಿನಿ ಶೆಟ್ಟಿಗೆ ಮಿಸ್​ ಇಂಡಿಯಾ 2022 ಕಿರೀಟ

Maltesh
Maltesh
Miss India sini shetty from karnataka

ರಾಜ್ಯದ ದಕ್ಷಿಣ ಕನ್ನಡ ಮೂಲದ ಯುವತಿ ಸಿನಿ ಶೆಟ್ಟಿ 2022ನೇ ಸಾಲಿನ ‘ಮಿಸ್‌ ಇಂಡಿಯಾ-2022’ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಹೌದು ಭಾನುವಾರ ಮುಂಬೈನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಈ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ರಾಜಸ್ಥಾನದ ರುಬಲ್‌ ಶೆಖಾವತ್‌ ಹಾಗೂ ಉತ್ತರ ಪ್ರದೇಶದ ಶಿನಾತಾ ಚೌಹಾಣ್‌ 1ನೇ ಹಾಗೂ 2ನೇ ರನ್ನರ್‌ ಅಪ್‌ ಆದರು.ಮುಂಬೈನಲ್ಲಿ ಹುಟ್ಟಿ ಬೆಳೆದ  ದಕ್ಷಿಣ ಕನ್ನಡ ಮೂಲದ 21 ವರ್ಷದ ಸಿನಿ ಮೂಲತಃ ಭರತನಾಟ್ಯ ಕಲಾವಿದೆಯಾಗಿದ್ದಾರೆ. ಇವರು ಮುಂದೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಇವರ ಬಗ್ಗೆ ಇನ್ನಷ್ಟು..!

ಸಿನಿ ಶೆಟ್ಟಿ ಮುಂಬೈನಲ್ಲಿ ಜನಿಸಿದರು. ಆದರೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ಮೂಲದವರು. ಅವರು ನಾಲ್ಕನೇ ವಯಸ್ಸಿನಲ್ಲಿ ನೃತ್ಯ ಮಾಡಲು ಪ್ರಾರಂಭಿಸಿದ್ದು, ಹದಿನಾಲ್ಕು ವರ್ಷದವರಿದ್ದಾಗ ತನ್ನ ಅರಂಗೇತ್ರಂ ಮತ್ತು ಭರತನಾಟ್ಯವನ್ನು ಪೂರ್ಣಗೊಳಿಸಿದರು.

ಇನ್ನು ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ ವೃತ್ತಿಪರ ವ್ಯಾಂಸಂಗ ಮಾಡುತ್ತಿದ್ದಾರೆ. ಹೀಗಿದ್ದರೂ ಅವರಿಗೆ ನೃತ್ಯ ಎಂದರೆ ಬಹಳ ಅಚ್ಚುಮೆಚ್ಚು ಎನ್ನಲಾಗಿದೆ..ಪಳ-ಪಳ ಹೊಳೆಯುವ ಸೌಂದರ್ಯ ನಿಮ್ಮದಾಗಬೇಕೆ? Vitamin E ನಲ್ಲಿದೆ ರಹಸ್ಯ.

ರನ್ನರ್ ಅಪ್​ಗಳ ಬಗ್ಗೆ ಇಲ್ಲಿದೆ ಮಾಹಿತಿ

ಇನ್ನು ಫೆಮಿನಾ ಮಿಸ್ ಇಂಡಿಯಾದ ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮಿರುವ ರೂಬಲ್ ಶೇಖಾವತ್ ಮೂಲತಃ ರಾಜಸ್ಥಾನದವರು. ಅಲ್ಲದೇ, ಅವರು ರಾಜಮನೆತನದ ಹಾಗೂ ಶ್ರೀಮಂತ ಕುಟುಂಬದ ಹಿನ್ನೆಲೆಯನ್ನು ಹೊಂದಿದ್ದಾರೆ. ರೂಬಲ್​  ನೃತ್ಯ, ನಟನೆ ಮತ್ತು ಚಿತ್ರಕಲೆ ಸೇರಿದಂತೆ ವಿವಿಧ ಹಲವು ಕ್ಷೇತ್ರಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಈ ಸಂಬಂಧಿತ ಕ್ಷೇತ್ರದಲ್ಲಿ ಪರಿಣಿತಿಯನ್ನು ಸಹ ಪಡೆದಿದ್ದಾರೆ.

ಹಾಗೆಯೇ ರೂಬಲ್ ಮುಖ್ಯವಾಗಿ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದು, ಬಹುಮುಖ ಪ್ರತಿಭೆ ಎನ್ನಬಹುದು. ಫೇಮಿನಾ ಮಿಸ್ ಇಂಡಿಯಾ 2022 ರ ಎರಡನೇ ರನ್ನರ್ ಅಪ್ ಶಿನಾತಾ ಚೌಹಾಣ್ ಒಬ್ಬ ವಿದ್ವಾಂಸರಾಗಿದ್ದಾರೆ ಮತ್ತು ಯಾವಾಗಲೂ ನಾಯಕತ್ವದ ಪಾತ್ರಗಳನ್ನು ವಹಿಸಿಕೊಂಡಿದ್ದಾರೆ..ದಾಸವಾಳದ ಹೂವಿನಲ್ಲಿದೆ ಅದ್ಬುತ ರಹಸ್ಯ! ನೀವು ಇದನ್ನೂ ತಿಳಿಯಲೆಬೇಕು!

Published On: 04 July 2022, 11:16 AM English Summary: Miss India sini shetty from karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2022 Krishi Jagran Media Group. All Rights Reserved.