1. ಸುದ್ದಿಗಳು

ರೈತರಿಗೆ ಗುಡ್ ನ್ಯೂ್ಸ್: ಮನೆ ಬಾಗಿಲಿಗೆ ಬರಲಿದೆ ಪಶು ಆಸ್ಪತ್ರೆ

Cowa

ಜಾನುವಾರಗಳನ್ನು ಹೊಂದಿರುವ ರೈತ ಬಾಂಧವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ವಿನೂತನವಾಗಿ ರೈತರ ಮನೆ ಬಾಗಿಲಿಗೆ ಪಶು ಆಸ್ಪತ್ರೆಯನ್ನು ತರಲು ಸರ್ಕಾರ ಸಜ್ಜಾಗಿದೆ.  ಪಶುಗಳ ತುರ್ತು ಚಿಕಿತ್ಸೆಯನ್ನು ರೈತರ, ಪಶುಪಾಲಕರ ಮನೆ ಬಾಗಿಲಿಗೆ ಕೊಂಡೊಯ್ಯುವ ಮಹಾತ್ವಾಕಾಂಕ್ಷಿ ಯೋಜನೆಯನ್ನು ಇದೇ ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ.
ಇನ್ನೂ ಮುಂದೆ ಜಾನುವಾರಗಳ ಆರೋಗ್ಯ ಸಮಸ್ಯೆಯಾದರೆ ಪಶು ಆಸ್ಪತ್ರೆಗೆ ಹೇಗೆ ತೆಗೆದುಕೊಂಡು ಹೋಗಬೇಕೆಂಬ ಚಿಂತೆ ಮಾಡುವ ಅವಶ್ಯಕತೆಯಿಲ್ಲ.ನಿಮ್ಮ ಮನೆ ಬಾಗಿಲಿಗೆ ಪಶು ಆಸ್ಪತ್ರೆ ಬರಲಿದೆ. ಅದೆಂತೆಹ ಆಸ್ಪತ್ರೆ ಎಂಬ ವಿಚಾರಗಳು ನಿಮ್ಮ ಮನಸ್ಸಿನಲ್ಲಿ ಮೂಡುತ್ತಿದ್ದರೆ ಇಲ್ಲಿದೆ ಮಾಹಿತಿ.

ಜಾನುವಾರುಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ಸುಸಜ್ಜಿತವಾದ ಪಶು ಚಿಕಿತ್ಸಾ ವಾಹನ (ಆಂಬ್ಯುಲೆನ್ಲ್) ಲೋಕಾರ್ಪಣೆ ಮಾಡಲು ಪಶುಸಂಗೋಪನೆ ಇಲಾಖೆ ಸಜ್ಜಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

ambulance

ರಾಜ್ಯದಲ್ಲಿ ಪಶು ವೈದ್ಯರ ಕೊರತೆಯಿದ್ದು ಅದೆಷ್ಟೋ ಬಾರಿ ಸಕಾಲದಲ್ಲಿ ವೈದ್ಯರು ನಿಗದಿತ ಸ್ಥಳಗಳಿಗೆ ತೆರಳಿ ಚಿಕಿತ್ಸೆ ನೀಡಲು ತುಂಬಾ ಶ್ರಮ ಹಾಗೂ ವೆಚ್ಚ ಭರಿಸಬೇಕಾಗುತ್ತದೆ. ಇನ್ನೂ ಮುಂದೆ ಈ ಸಮಸ್ಯೆ ಬರಬಾರದೆಂದು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಸುಸಜ್ಜಿತ ಸುಮಾರು 15 ಸಂಚಾರಿ ಪಶು ಚಿಕಿತ್ಸಾ ವಾಹನ (ಆಂಬುಲೆನ್ಸ್ )ಗಳನ್ನು ಸದ್ಯದಲ್ಲೇ ಲೋಕಾರ್ಪಣೆ ಮಾಡಲಿದ್ದಾರೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ ಹೆಲ್ಪಲೈನ್ ಸೇವೆಗಳಿಗೆ ಲಿಂಕ್ ಮಾಡಿ 24*7 ಜನು ವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿರುತ್ತದೆ ಎಂದಿದ್ದಾರೆ.

ಪಶು ಚಿಕಿತ್ಸಾ ವಾಹನದ ವಿಶೇಷತೆ:
ಅತ್ಯಧ್ಯುನಿಕ, ಸುಸಜ್ಜಿತವಾದ ಈ ವಾಹನದಲ್ಲಿ ವಿಶೇಷವಾದ ಪಶು ಸೇವಾ ಸೌಲಭ್ಯಗಳಿವೆ. ಶತ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಇರುವುದು ವಿಶೇಷ ತುರ್ತು ಚಿಕಿತ್ಸಾ ಘಟಕ, ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳು ವಾಹನದಲ್ಲಿ ಇರುತ್ತವೆ.

ಯಾವ್ಯಾವ ಸಮಸ್ಯೆಗೆ ಚಿಕಿತ್ಸೆ:

ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಅರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸ ಬೇಕಾದ ಅನಿವಾರ್ಯತೆ ಇರುತ್ತದೆ.ವಿಷಪ್ರಾಶನ, ಪ್ರಸವಕ್ಕೆ ಸಂಭಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದು.
 ಅಪಘಾತ, ಮೂಳೆಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಜಾನುವರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯುವ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ.

Published On: 20 June 2020, 10:48 AM English Summary: Mobile veterinary hospitals

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.