News

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ!

23 November, 2022 4:07 PM IST By: Hitesh
Moderate rain in different districts of the state!

ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗಿರುವುದು ವರದಿ ಆಗಿದೆ.

 ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ: ಕ್ರಿಮಿನಾಶಕ ಸಿಂಪಡಣೆಗೆ 10 ಕೋಟಿ ಅನುದಾನ; ಸಿ.ಎಂ ಬೊಮ್ಮಾಯಿ

ಅಜ್ಜಂಪುರ, ರಾಯಲ್ಪಾಡು ವ್ಯಾಪ್ತಿಯಲ್ಲಿ ತಲಾ 2 ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ. ಕನಕಪುರ, ಗೌರಿಬಿದನೂರು, ಮೈಸೂರು, ಯಗಟಿ ವ್ಯಾಪ್ತಿಯಲ್ಲಿ ತಲಾ ಒಂದು ಸೆಂ.ಮೀ ಮಳೆ ಆಗಿದೆ.

ರಾಜ್ಯದ ಸಮತಟ್ಟದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌ ದಾವಣಗೆರೆಯಲ್ಲಿ ದಾಖಲಾಗಿದೆ.

ರಸಗೊಬ್ಬರ ಕೊರತೆಯಿಂದ ಆಹಾರ ಬಿಕ್ಕಟ್ಟು: ಪ್ರಧಾನಿ ಮೋದಿ ಎಚ್ಚರಿಕೆ     

ಇನ್ನು ಮುಂದಿನ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಅಲ್ಲದೇ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆ ಆಗುವ ಸಾಧ್ಯತೆ ಇದೆ.

ರಾಜ್ಯದ ಹವಾಮಾನದಲ್ಲಿ ಗುರುವಾರ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಕೆಲವು ಕಡೆಗಳಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ ಇರಲಿದೆ.

Central Budget ಗೋಧಿ ರಫ್ತು ನಿರ್ಬಂಧ ಸಡಿಲಿಸಿ: ಕೇಂದ್ರ ಸರ್ಕಾರಕ್ಕೆ ರೈತರ ಮನವಿ 

ರಾಜ್ಯದಲ್ಲಿ ಗುರುವಾರ ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್‌ ಒಳಗೆ ಜಿಲ್ಲೆಗೊಂದು ಗೋಶಾಲೆ ನಿರ್ಮಿಸಿ: ಪ್ರಭು ಚವ್ಹಾಣ