ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಿದೆ.
ತಿಂಗಳಲ್ಲಿ 36 ಲಕ್ಷ ಆದಾಯ ಗಳಿಸಿದ ಎಂಬಿಎ ಪದವೀಧರ; ಈ ಯಶೋಗಾಥೆ ನಿಮಗೂ ಪ್ರೇರಣೆ!
ಕೋಲಾರ, ಹೊಸಪೇಟೆ, ದೇವನಹಳ್ಳಿಯಲ್ಲಿ ತಲಾ ಎರಡು ಸೆಂ.ಮೀ, ಉಪ್ಪಿನಂಗಡಿ, ಚಿಂತಾಮಣಿ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಜಿಕೆವಿಕೆ, ಮಾಗಡಿ ಹಾಗೂ ಬೆಂಗಳೂರು ನಗರ ಸೇರಿದಂತೆ ವಿವಿಧೆಡೆ ಮಳೆ ಆಗಿದೆ.
Pm kisan, ಕಿಸಾನ್ ಪಿಂಚಣಿ ಯೋಜನೆ: 200 ರೂಪಾಯಿ ಹೂಡಿಕೆ ಮಾಡಿ 3 ಸಾವಿರ ಪಿಂಚಣಿ ಗಳಿಸಬಹುದು!
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಇನ್ನು ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಆಗಿಲ್ಲ.
ರಾಜ್ಯದಲ್ಲಿ ಹೆಚ್ಚಾಯ್ತು ಚಳಿ; ಬೆಂಗಳೂರಲ್ಲಿ ದಶಕದಲ್ಲೇ ಕನಿಷ್ಠ ತಾಪಮಾನ!
ಕಳೆದ 24 ಗಂಟೆಗಳಲ್ಲಿ ರಾಜ್ಯದ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಜ್ಯ ಸಮತಟ್ಟಾದ ಪ್ರದೇಶಗಳಲ್ಲಿ ಒಣಹವೆ ಅತೀ ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.
ರಾಜ್ಯದಲ್ಲಿ ಮುಂಜಾನೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಗಳವಾರ ರಾಜ್ಯದಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.