ಈಗಾಗಲೇ ನೈರುತ್ಯ ಮುಂಗಾರು ಗುಜರಾತ್ ರಾಜ್ಯವನ್ನು ಪ್ರವೇಶಿಸಿದ್ದು, ಮುಂದಿನ ಐದು ದಿನಗಳಲ್ಲಿ ರಾಜ್ಯದ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ.
ಜೊತೆಗೆ ಮಹಾರಾಷ್ಟ್ರ, ಮಧ್ಯ ಪ್ರದೇಶದ ಹಲವು ಭಾಗಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಹಮದಾಬಾದ್, ಗಾಂಧಿ ನಗರ, ವಲಸಾಡ್ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ದಾದ್ರ ಮತ್ತು ನಗರ್ ಹವೇಲಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ಗುಜರಾತ್ ಉತ್ತರ ಭಾಗದ ಕೆಲವು ಪ್ರದೇಶಗಳಲ್ಲೂ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನೂ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಚುರುಕಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆ ಆರಂಭವಾಗಿದೆ.
ಮುಂದಿನ ಐದು ದಿನಗಳಲ್ಲಿ ಗುಜರಾತ್ ನಲ್ಲಿ ಭಾರಿ ಮಳೆ
15 June, 2020 5:52 PM IST