1. ಸುದ್ದಿಗಳು

ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆಯ ದಿನ

2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಚಿತ್ತಾಪುರ ತಾಲೂಕಿನ ರೈತರು ವಿವಿಧ ಬೆಳೆಗಳಿಗೆ ವಿಮಾ ನೋಂದಣಿ ಮಾಡಿಕೊಳ್ಳಲು 2021ರ ಜುಲೈ 31 ಕೊನೆಯ ದಿನವಾಗಿದೆ ಎಂದು ಚಿತ್ತಾಪುರ ಕೃಷಿ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದೆ. ತೊಗರಿ, ಹೆಸರು, ಉದ್ದು, ಸೂರ್ಯಕಾಂತಿ (ಮಳೆಯಾಶ್ರಿತ) ಬೆಳೆಗಳಿಗೆ ಹಾಗೂ ಭತ್ತ, ಸೋಯಾ ಅವರೆ (ನೀರಾವರಿ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2021ರ ಜುಲೈ 31 ಕೊನೆಯ ದಿನವಾಗಿದೆ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಥಳ ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಅಲ್ಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘಾ ಸ್ಪೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದಲ್ಲಿ ರೈತರು ಬೆಳೆ ವಿಮೆಯ ಸದುಪಯೋಗ ಪಡೆಯಬಹುದಾಗಿದೆ.

ರೈತರು  ಬೆಳೆವಾರು ವಿಮಾ ಮೊತ್ತ ಹಾಗೂ ಉಳಿದ ಬೆಳೆಗಳ ಆಯ್ಕೆಗೆ ಸಂಬAಧಿಸಿದAತೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ನೋಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಏನಿದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ?

ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ 48 ಗಂಟೆಯೊಳಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 48 ಗಂಟೆಗಳೊಳಗಾಗಿ ತಿಳಿಸಿದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.

ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಅಲ್ಲದೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.

ರೈತರು  ಬೆಳೆವಾರು ವಿಮಾ ಮೊತ್ತ ಹಾಗೂ ಉಳಿದ ಬೆಳೆಗಳ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ನೋಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Published On: 10 June 2021, 09:35 PM English Summary: monsoon crop insurance last date july 31st

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.