ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಮುಂದಿನ ಎರಡು ದಿನಗಳ ಕಾಲ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ಹಿನ್ನೆಲಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 19 ರಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಜುಲೈ 20 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇದೇ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಸಾಧಾರಣ ಮಳೆಯಾಗಬಹುದು.
ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಗರಿಷ್ಠ 4.1 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
Read More: ರಾಜ್ಯದ ಹಲವೆಡೆ ವರುಣನ ಅಬ್ಬರ-ಇನ್ನೂ ಐದು ಭಾರೀ ಮಳೆ ಸಾಧ್ಯತೆ