ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜು.10ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
‘ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ.
ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, 3 ಮೀಟರ್‌ಗಿಂತ ದೈತ್ಯ ಅಲೆಗಳು ಏಳಲಿವೆ. ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.