News

ರಾಜ್ಯದ 18 ಜಿಲ್ಲೆಗಳಲ್ಲಿ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ

15 July, 2020 10:18 AM IST By:

ಅರಬ್ಬಿ ಸಮುದ್ರದ ಪೂರ್ವ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಜುಲೈ 15 ಮತ್ತು 16ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಜು.15ರಿಂದ 18ರವರೆಗೆ ಎಲ್ಲೊ ಅಲರ್ಟ್‌ ಹಾಗೂ ಜು. 19ರಂದು ಆರೆಂಜ್‌ ಅಲರ್ಟ್‌ ಘೋಷಿಸಿದೆ

ಕರಾವಳಿಯಲ್ಲಿ  ಭಾಗದಲ್ಲಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 2.5ರಿಂದ 3.3 ಮೀಟರ್ ಗಳಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹಾಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.