News

ಕರಾವಳಿ ಉತ್ತರ ಭಾಗದಲ್ಲಿ ಗುಡುಗು ಸಿಡಿಲು ಸಹಿ ಮಳೆ ಸಾಧ್ಯತೆ

01 July, 2020 9:48 AM IST By:

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏಳುತ್ತಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 ಬೆಂಗಳೂರಿನಲ್ಲೂ ಮುಂದಿನ ಐದು ದಿನಗಳವರೆಗೆ ಸಾಧಾರಣ ಮಳೆಯಾಗಲಿದೆ.  ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜು.2ರವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.