News

Morbi bridge collapse: ಗುಜರಾತ್‌ ಸೇತುವೆ ಕುಸಿತ; 141 ಜನ ಸಾವು, ಸ್ಥಳಕ್ಕೆ ಪ್ರಧಾನಿ ಭೇಟಿ ಸಾಧ್ಯತೆ!

31 October, 2022 11:28 AM IST By: Kalmesh T
Morbi bridge collapse in Gujarat ; 132 dies

ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ಸೇತುವೆ ಕುಸಿತ ದುರಂತದಲ್ಲಿ ಇದುವರೆಗೆ 141 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಏರುತ್ತಲೆ ಇದೆ.

ಇದನ್ನೂ ಓದಿರಿ: “ಕ್ಯಾಡ್ಬರಿ ಜಾಹೀರಾತಿನಲ್ಲಿ ಮೋದಿಗೆ ಅವಮಾನ”: ಟ್ವಿಟರ್‌ನಲ್ಲಿ ಬಾಯ್ಕಾಟ್‌ ಕ್ಯಾಡ್ಬರಿ ಟ್ರೆಂಡ್‌!

Morbi bridge collapse: ಗುಜರಾತ್‌ನ ಮಚ್ಚು ಎಂಬ ನದಿಗೆ ನಿರ್ಮಿಸಿರುವ ಮೊರ್ಬಿ ತೂಗು ಸೇತುವೆ ನಿನ್ನೆ ಕುಸಿದು ಬಿದ್ದು ದುರಂತ ಸಂಭವಿಸಿತ್ತು. ಸೇತುವೆ ಕುಸಿದಾಗ ಅಲ್ಲಿಂದ ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಎನ್‍ಡಿಆರ್‌ಎಫ್, ವಾಯುಪಡೆ, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ದೋಣಿ, ಬೋಟ್‍ಗಳ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಈಗಾಗಲೇ 177ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.

RBI ನಿಂದ ನವೆಂಬರ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿ ಬಿಡುಗಡೆ; ಒಟ್ಟು 20 ದಿನ ಬಂದ್‌ ಇರಲಿವೆ ಈ ಬ್ಯಾಂಕ್‌ಗಳು!

Morbi bridge collapse: 140ಕ್ಕೂ ಅಧಿಕ ವರ್ಷಗಳ ಇತಿಹಾಸ ಇರುವ ಈ ತೂಗು ಸೇತುವೆ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಕೇಬಲ್‍ಗಳ ಸಹಾಯದಿಂದ ಬ್ರಿಟಿಷರು ನಿರ್ಮಿಸಿರುವ ಅತಿ ಉದ್ದದ ತೂಗು ಸೇತುವೆ ಇದಾಗಿದೆ.

ನಿನ್ನೆ ರಜೆ ದಿನದ ಹಿನ್ನೆಲೆ ಈ ಪ್ರದೇಶದಲ್ಲಿ ಜನ ದಟ್ಟನೆ ಇತ್ತು. ನೂರು ಜನರ ಸಾಮರ್ಥ್ಯಯುಳ್ಳ ಸೇತುವೆ ಮೇಲೆ ಐದು ನೂರಕ್ಕೂ ಅಧಿಕ ಮಂದಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೇಬಲ್ ಕಟ್ ಆಗಿ ಧರಗೆ ಉರುಳಿದೆ ಎನ್ನಲಾಗುತ್ತಿದೆ.

Milk Price: ಹಾಲು ಉತ್ಪಾದಕರಿಗೆ ಸಿಹಿಸುದ್ದಿ; ನವೆಂಬರ್‌ 1ರಿಂದ ಲೀಟರ್‌ಗೆ 2ರೂ ಹೆಚ್ಚಳ!

Morbi bridge collapse: ಶಿಥಿಲಗೊಂಡಿದ್ದ ಹಿನ್ನೆಲೆ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗಿತ್ತು. ನವೀಕರಣಗೊಂಡ ಸೇತುವೆಯನ್ನು ಐದು ದಿನಗಳ ಹಿಂದೆ ಉದ್ಘಾಟಿಸಲಾಗಿತ್ತು.

ಮೂರು ದಿನದ ಹಿಂದೆ ಜನರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿತ್ತು. ಈಗ ಏಕಾಏಕಿ ಕುಸಿದಿರುವುದು ಅಕ್ರಮ ಕಾಮಗಾರಿ ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ.

10ನೇ ತರಗತಿ ಪಾಸಾಗಿದ್ದರೇ ಸಾಕು KMF ನಲ್ಲಿವೆ ಉದ್ಯೋಗಾವಕಾಶ; ರೂ.97100 ಸಂಬಳ!

ಈ ಘಟನೆ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಮೃತರ ಕುಟುಂಬಕ್ಕೆ ಸಾಂತ್ವಾನ ತಿಳಿಸಿರುವ ಅವರು 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಾಯಾಳುಗಳಿಗೆ ಐವತ್ತು ಸಾವಿರ ಪರಿಹಾರ ನೀಡಿದ್ದಾರೆ. ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.