ರಾಜ್ಯದಲ್ಲಿ ನೈರುತ್ಯ ಮುಂಗಾರು ಅಂತ್ಯವಾಗಿದೆ. ಈ ಬಾರಿ ರಾಜ್ಯದ ಯಾವ ಜಿಲ್ಲೆಯಲ್ಲೂ ಮಳೆ ಕೊರತೆ ಆಗಿಲ್ಲ ಎನ್ನುವುದು ವಿಶೇಷ
ರಾಜ್ಯದಲ್ಲಿ ನೈರುತ್ಯ ಮುಂಗಾರು ಅಕ್ಟೋಬರ್ 23ಕ್ಕೆ ಅಂತ್ಯವಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಈ ಬಾರಿ ರಾಜ್ಯದಲ್ಲಿ ನೈಋುತ್ಯ ಮುಂಗಾರಿನಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆ ಆಗಿದೆ.
ಇದನ್ನೂ ಓದಿರಿ: ಭಾರತ ಮೂಲದ ರಿಷಿ ಸುನಕ್ ಬ್ರಿಟನ್ ಪ್ರಧಾನಿ, ಸಂಭ್ರಮಕ್ಕೆ ಮತ್ತೊಂದು ಕಾರಣ!
ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.20ರಷ್ಟುಹೆಚ್ಚು ಮಳೆಯಾಗಿದೆ. ರಾಜ್ಯದ ಯಾವುದೇ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಳೆಯ ಕೊರತೆ ಆಗಿಲ್ಲ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ.
ಚಿನ್ನ, ಬೆಳ್ಳಿ ದರ ಯಥಾಸ್ಥಿತಿ, ಎಷ್ಟಿದೆ ಚಿನ್ನ, ಬೆಳ್ಳಿ ದರ ?
ರಾಜ್ಯದ ವಾಡಿಕೆಯ ಮುಂಗಾರು ಮಳೆಯ ಪ್ರಮಾಣ 85.2 ಸೆಂ.ಮೀ. ಎಂದು ಅಂದಾಜು ಮಾಡಲಾಗಿತ್ತು. ಆದರೆ, ಈ ಬಾರಿ 100.19 ಸೆಂ.ಮೀ. ಮಳೆ ಸುರಿಯುವ ಮೂಲಕ ಸುಮಾರು ಶೇ. 20ರಷ್ಟುಹೆಚ್ಚು ಮಳೆಯಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈ ಬಾರಿ 101.02 ಸೆಂ.ಮೀ. ಮಳೆ (ವಾಡಿಕೆ ಮಳೆ 67.84), ಉತ್ತರ ಒಳನಾಡಿನಲ್ಲಿ 65.11 ಸೆಂ.ಮೀ. ಮಳೆ (ವಾಡಿಕೆ ಮಳೆ 48.08) ಹಾಗೂ ಕರಾವಳಿಯಲ್ಲಿ 323.28 ಸೆಂ.ಮೀ. (ವಾಡಿಕೆ ಮಳೆ 307.55) ಮಳೆಯಾಗಿದೆ.
ಸಾಮಾನ್ಯವಾಗಿ ಅತಿ ಹೆಚ್ಚು ಮಳೆಯಾಗುವ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಈ ಬಾರಿ ವಾಡಿಕೆಯಷ್ಟೆಮಳೆ ಆಗಿದೆ. ಆದರೆ, ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ. 49ರಷ್ಟುಹೆಚ್ಚು ಮಳೆ ಸುರಿದಿದೆ. ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ. 34ರಷ್ಟುಹೆಚ್ಚು ಮಳೆಯಾಗಿದೆ.
ಪಿಎಂ ಉಜ್ವಲ ಯೋಜನೆಯಡಿ ಸರ್ಕಾರದಿಂದ ದೊರೆಯಲಿವೆ 2 ಉಚಿತ ಸಿಲೆಂಡರ್! ಯಾರು ಅರ್ಹರು ಗೊತ್ತೆ?
ಯಾವ ಜಿಲ್ಲೆಯಲ್ಲಿ ಹೆಚ್ಚು ಮಳೆ ?
8 ಜಿಲ್ಲೆಯಲ್ಲಿ ಅತಿ ಹೆಚ್ಚು (ವಾಡಿಕೆಗಿಂತ ಶೇ. 60ಕ್ಕಿಂತ ಹೆಚ್ಚು), 12 ಜಿಲ್ಲೆಯಲ್ಲಿ ಹೆಚ್ಚು (ವಾಡಿಕೆಗಿಂತ ಶೇ.20ರಿಂದ ಶೇ.59 ಹೆಚ್ಚು), 11 ಜಿಲ್ಲೆಯಲ್ಲಿ (ವಾಡಿಕೆಗಿಂತಶೇ. -19ರಿಂದ ಶೇ. 19) ಮಳೆಯಾಗಿದೆ.
ಅತಿ ಹೆಚ್ಚು ಮಳೆ ಪಡೆದ ಎಲ್ಲ ಜಿಲ್ಲೆಗಳು ದಕ್ಷಿಣ ಒಳನಾಡಿನಲ್ಲಿವೆ.
ಮಂಡ್ಯ, ತುಮಕೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ.
ಇನ್ನು ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ವಿಜಯನಗರ, ಬಳ್ಳಾರಿ, ಗದಗ, ರಾಯಚೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿದೆ.
ಶಿವಮೊಗ್ಗ, ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕೊಂಚ ಕಡಿಮೆ ಮಳೆಯಾಗಿದ್ದರೆ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಕೊಪ್ಪಳ, ಬೀದರ್ ಮತ್ತು ಕಲಬುರಗಿಯಲ್ಲಿ ವಾಡಿಕೆಯ ಮಳೆಯಾಗಿದೆ.
ಇದನ್ನೂ ಓದಿರಿ: ಚಿನ್ನ, ಬೆಳ್ಳಿ ದರ ಯಥಾಸ್ಥಿತಿ, ಎಷ್ಟಿದೆ ಚಿನ್ನ, ಬೆಳ್ಳಿ ದರ ?
ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಅಂತ್ಯವಾಗಿದ್ದರೂ, ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅಕ್ಟೋಬರ್ 15ರ ತನಕ ಮುಂಗಾರು ಮಾರುತಗಳು ಚಾಲ್ತಿಯಲ್ಲಿರಲಿದ್ದು,
ಅಕ್ಟೋಬರ್ 10ರ ಬಳಿಕವೇ ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ಕಡಿಮೆಯಾಗಲಿದೆ.
ಅಲ್ಲದೇ ಅಕ್ಟೋಬರ್‌ನಿಂದ ಡಿಸೆಂಬರ್ ತನಕ ಹಿಂಗಾರು ಮಾರುತಗಳು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ,
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಣಹವೆ: ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, ಗರಿಷ್ಠ ತಾಪಮಾನ 34.7 ಡಿಗ್ರಿ ಸೆಲ್ಸಿಯಸ್ ಹೊನ್ನಾವರದಲ್ಲಿ ದಾಖಲಾಗಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಅಂದರೆ, ಉಷ್ಣಾಂಶ 12.4 ಡಿಗ್ರಿ ಸೆಲ್ಸಿಯಸ್ ಬೆಳಗಾವಿಯಲ್ಲಿ ದಾಖಲಾಗಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ.
ರಾಜ್ಯದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.