heavy rains in karnataka : ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಇಂದಿನಿಂದ 4 ದಿನಗಳವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Heavy rain : ರಾಜ್ಯದ ಹಲವು ನದಿ ಮತ್ತು ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ ಭಾಗದಲ್ಲಿ ತುಸು ಹೆಚ್ಚೆ ಮಳೆಯಾಗುತ್ತಿದೆ. ಹಾಗೆಯೇ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಜುಲೈ 13ರವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮತ್ತೊಂದೆಡೆ ಉತ್ತರ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ ಭೀಕರ ಮಳೆಯ ಕಾರಣದಿಂದ ಅಂದಾಜು 21 ಜನ ಸಾವನ್ನಪ್ಪಿದ್ದು, 47ಕ್ಕೂ ಹೆಚ್ಚಿನ ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಸಚಿವರು ಭೇಟಿ ನೀಡಿದರು. ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಿದರು.
ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ಧವಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಹೇಳಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜುಲೈ ಕೊನೆ ವಾರದವರೆಗೆ ಕಾದುನೋಡಿ ಮೋಡ ಬಿತ್ತನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದರು.
Share your comments