1. ಸುದ್ದಿಗಳು

Griha Jyoti Yojana ಗೃಹಜ್ಯೋತಿ ಯೋಜನೆಗೆ 50 ಲಕ್ಷಕ್ಕೂ ಹೆಚ್ಚು ಜನರಿಂದ ಅರ್ಜಿ ಸಲ್ಲಿಕೆ!

Hitesh
Hitesh
More than 50 lakh people have applied for Griha Jyoti Yojana!

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ರಾಜ್ಯದ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು,

ಇಲ್ಲಿಯ ವರೆಗೆ 50 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ ಆಗಿದೆ.

ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಪ್ರತಿ ಮನೆಗೆ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ಸೌಲಭ್ಯ ಸಿಗಲಿದೆ. ಭಾನುವಾರದ ಸಂಜೆಯ ವರೆಗೂ 51,17,693 ಜನ ಅರ್ಜಿ ಸಲ್ಲಿಸಿದ್ದಾರೆ.

ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು: ಗೃಹಜ್ಯೋತಿ ಯೋಜನೆಗೆ ನೀವು ಹತ್ತಿರದ ವಿದ್ಯುತ್‌ ಕಚೇರಿ, ನಾಡಕಚೇರಿ, ಕಂಪ್ಯೂಟರ್‌, ಮೊಬೈಲ್‌,

ಲ್ಯಾಪ್‌ಟಾಪ್‌ನಲ್ಲಿ ಅಧಿಕೃತ ಪೋರ್ಟಲ್‌ನಲ್ಲಿ https://sevasindugs.karnataka.gov.in ನಲ್ಲಿ ಲಾಗಿನ್‌ ಆಗುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನೋಂದಣಿಗೆ ಇವಿಷ್ಟು ಮಾಹಿತಿ ಇದ್ದರೆ ಸಾಕು

ಗೃಹಜ್ಯೋತಿಯ ಯೋಜನೆಯ ಅಡಿಯಲ್ಲಿ ನೀವು ಉಚಿತ ವಿದ್ಯುತ್‌ ಪಡೆಯಲು ಕೆಲವು ನಿರ್ದಿಷ್ಟ ಕ್ರಮಗಳನ್ನು ಅನುಸರಿಸಿದರೆ ಸಾಕು.

ಅದರ ಹೊರತಾಗಿ ನೀವು ಯಾವುದೇ ಹೆಚ್ಚುವರಿ ದಾಖಲೆಗಳನ್ನು ನೀಡುವ ಅವಶ್ಯಕತೆಯೂ ಇರುವುದಿಲ್ಲ.

ಗೃಹಜ್ಯೋತಿ ಯೋಜನೆಗೆ ನೋಂದಣಿ ಆಗುವ ಪ್ರಕ್ರಿಯೆಯು ಅತ್ಯಂತ ಸರಳೀಕರಣವಾಗಿದ್ದು, ಗ್ರಾಹಕರು ಯಾವುದೇ ದಾಖಲೆಗಳನ್ನು ನೀಡಬೇಕಾಗಿಲ್ಲ.

ಕೇವಲ ವಿದ್ಯುತ್ ಬಿಲ್‌'ನಲ್ಲಿರುವ ಖಾತೆ ಸಂಖ್ಯೆ, ಗ್ರಾಹಕರ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನಷ್ಟೇ ನಮೂದಿಸಿದರೆ ಸಾಕು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. 

1,200 ಕೋಟಿ ರೂ. ಅನುದಾನ ಅವಶ್ಯ

ಗೃಹಜ್ಯೋತಿ ಯೋಜನೆಯನ್ನು ಅನುಷ್ಠಾನ ಮಾಡುವುದಕ್ಕೆ ಬರೋಬ್ಬರಿ 1,200 ಕೋಟಿ ರೂಪಾಯಿ ಅವಶ್ಯಕತೆ ಇದೆ.

ಹೀಗಾಗಿ, ಸರ್ಕಾರವು ಈ ಯೋಜನೆಯಲ್ಲಿ ಯಾವುದೇ ಲೋಪ (ಯೋಜನೆಯ ಬಳಕೆಯಲ್ಲಿ)ದೋಷವಾಗದಂತೆ ಎಚ್ಚರಿಕೆ

ವಹಿಸುವ ನಿಟ್ಟಿನಲ್ಲಿ ಕೆಲವು ಪ್ರಮುಖವಾದ ಷರತ್ತುಗಳನ್ನು ವಿಧಿಸಲಾಗಿದೆ. 

ಗೃಹಜ್ಯೋತಿ ಯೋಜನೆಯಡಿ 200ಯೂನಿಟ್‌ಗಳನ್ನು ಉಚಿತವಾಗಿ ನೀಡಲು ರಾಜ್ಯ ಸರ್ಕಾರವು ಯೋಜನೆಯನ್ನು ರೂಪಿಸಿದೆ.

ಆದರೆ,ಈ ಯೋಜನೆಯ ಅನುಷ್ಠಾನಕ್ಕೆ ಬರೋಬ್ಬರಿ 1200 ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ ಎಂದು ಸರ್ಕಾರ ಈಗಾಗಲೇ ಅಂದಾಜಿಸಿದೆ.

ಅಲ್ಲದೇ ಈ ಯೋಜನೆಯ ಫಲಾನುಭವಿಗಳ ಸಂಖ್ಯೆಯು ಬರೋಬ್ಬರಿ 2 ಕೋಟಿಗೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ.   

ಸರ್ವರ್‌ ಸಮಸ್ಯೆ ಹೊಸ ಲಿಂಕ್‌

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ರಿಜಿಸ್ಟರ್‌ ಆಗಲು ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಸೇವಾ ಸಿಂಧು ಪೋರ್ಟಲ್‌ನಲ್ಲಿ ರಿಜಿಸ್ಟರ್‌

ಆಗುವ ಸಂದರ್ಭದಲ್ಲಿ ಸಮಸ್ಯೆ ಆಗುತ್ತಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ  https://sevasindugs.karnataka.gov.in ಎನ್ನುವ ಲಿಂಕ್‌ ಅನ್ನು ಸಹ ಪರಿಚಯಿಸಲಾಗಿದೆ.

Gruha Jyothi scheme Registration: ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿ

ಎರಡನೇ ದಿನಕ್ಕೆ ಒಟ್ಟು 1,61,958 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದರು. 

ಕೊನೆಯ ದಿನ ನಿಗದಿ ಮಾಡಿಲ್ಲ

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಯಾವುದೇ ಕೊನೆಯ ದಿನವನ್ನು ಸರ್ಕಾರ ನಿಗದಿ ಮಾಡಿಲ್ಲ.

ನೋಂದಣಿ ಪ್ರಕ್ರಿಯೆ ತಡವಾದರೂ ನೀವು ಆತಂಕಪಡುವ ಅವಶ್ಯಕತೆ ಇರುವುದಿಲ್ಲ.

ಈ ಯೋಜನೆಯ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದಕ್ಕೆ ಯಾವುದೇ ನಿರ್ದಿಷ್ಟ ದಿನಾಂಕವನ್ನು ನಿಗದಿ ಮಾಡಿಲ್ಲ.   

image courtesy pexels

Published On: 26 June 2023, 03:54 PM English Summary: More than 50 lakh people have applied for Griha Jyoti Yojana!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.