1. ಸುದ್ದಿಗಳು

Toll Increased ಮೈಸೂರು- ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ಶೇ.22ರಷ್ಟು ಮತ್ತೆ ಹೆಚ್ಚಳ!

Hitesh
Hitesh
Mysore-Express highway toll increased by 22% again!

 ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಮತ್ತೊಮ್ಮೆ ಹೆಚ್ಚಳ ಮಾಡಲಾಗಿದ್ದು, ಈ ಬಾರಿ ಟೋಲ್‌ ದರವನ್ನು ಶೇ.22ರಷ್ಟು ಹೆಚ್ಚಳವಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮತ್ತು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಟೋಲ್‌ ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕೋಶ್ರ ವ್ಯಕ್ತವಾಗಿದ್ದು,

ಈ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸಹ ಕಿಡಿಕಾರಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು

ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ.

Bharatiya Janata Party (BJP)  & Indian National Congress - Karnataka ಸರಕಾರಗಳೆರಡೂ ಸೇರಿ ಜನರ ಮೇಲೆ

ಮತ್ತಷ್ಟು ಭಾರ ಹೊರೆಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ,

ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು 'ಹೆದ್ದಾರಿಯಲ್ಲಿ ಹಗಲು ದರೋಡೆಯಷ್ಟೇ ಎಂದಿದ್ದಾರೆ.

ಎಕ್ಸ್‌ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು.

ಈಗ 20% ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ.

ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂದು ಅವರು ಹೇಳಿದ್ದಾರೆ.

ಅಲ್ಲದೇ ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ  ಮಾಡಿಕೊಂಡಿವೆ.

ಇನ್ನೂ ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ

ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ.

ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು.

ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರಕಾರ ಒತ್ತಡ ಹಾಕಬೇಕು.

ಬೆಲೆಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ ಜನರು ತಕ್ಕಪಾಠ ಕಲಿಸುತ್ತಾರೆ.

ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ BJP Karnataka ಸರಕಾರದ ದಾರಿಯಲ್ಲಿಯೇ ಈ ಸರಕಾರವೂ ನಡೆಯುತ್ತಿದೆಯಾ?

ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.   

ಈ ಸುದ್ದಿಗಳನ್ನೂ ಓದಿರಿ:

Annabhagya Yojana 10 ಕೆ.ಜಿ ಉಚಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ಅಡ್ಡಿ: ಸಿದ್ದರಾಮಯ್ಯ ಏನು ಹೇಳಿದ್ರು?

Heavy Rain ಬಿಪೋರ್‌ಜಾಯ್‌ ಚಂಡಮಾರುತ ಪ್ರಭಾವ ರಾಜ್ಯದಲ್ಲಿ ಭಾರೀ ಮಳೆ!

Cyclone Biparjoy ಬಿಪೋರ್‌ಜಾಯ್‌ ಚಂಡಮಾರುತ ತೀವ್ರ; ಕೇಂದ್ರ ಗೃಹ ಸಚಿವರಿಂದ ತುರ್ತು ಸಭೆ!

Biporjoy Cyclone ಬಿಪೊರ್‌ಜಾಯ್‌ ಚಂಡಮಾರುತ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ!

Published On: 15 June 2023, 02:09 PM English Summary: Mysore-Express highway toll increased by 22% again!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.