1. ಸುದ್ದಿಗಳು

Nandini Milk: ನಂದಿನಿ ಹಾಲು ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ: ಸಿಎಂ ಬೊಮ್ಮಾಯಿ

Kalmesh T
Kalmesh T
Nandini Milk: Nandini will always maintain its separate existence: CM Bommai

ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ. ಅವರು ಇಂದು ತಮ್ಮ ಆರ್.ಟಿ. ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

LPG Big Update: ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ! ಇಲ್ಲಿದೆ ಹೊಸ ದರದ ಕುರಿತಾದ ಮಾಹಿತಿ

ನಂದಿನಿಯನ್ನು ಅಮುಲ್‌ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. 

ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು.

ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ  ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.

ಹೊಸ ವರ್ಷಕ್ಕೆ ಮೋದಿ ಸಿಹಿಸುದ್ದಿ: 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರಧಾನ್ಯ ವಿತರಣೆ - 2 ಲಕ್ಷ ಕೋಟಿ ಸಬ್ಸಿಡಿ!

ಒಟ್ಟಾಗಿ ಕೆಲಸ ಮಾಡಿದರೆ ಲಾಭ!

ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು.

ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ.

ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ  ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು.

Fitment Factor: ಸರ್ಕಾರಿ ನೌಕರರೇ ಗಮನಿಸಿ, ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಿದ್ಧತೆ!

ಮೀಸಲಾತಿ ಸಂವಿಧಾನದ ಚೌಕಟ್ಟಿನಲ್ಲಿ ಇದೆ

ಮೀಸಲಾತಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್  ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ಕಷ್ಟವಾಗುತ್ತಿದೆ. ಅದಕ್ಕೆ ವ್ಯಾಖ್ಯಾನ ಮಾಡಲು ಬರುವುದಿಲ್ಲ.

ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ ಎಂದರು.

Published On: 01 January 2023, 04:16 PM English Summary: Nandini Milk: Nandini will always maintain its separate existence: CM Bommai

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.