ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ಸರ್ಕಾರ ಆದೇಶಿಸಿದೆ.
ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳು ಶುಕ್ರವಾರದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆವರೆಗೂ ತೆರೆಯಲು ಸರ್ಕಾರ ಆದೇಶಿಸಿದೆ.
ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಕರ್ಪ್ಯೂ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಸೇವೆಗಳಿಗೆ ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ಮಾತ್ರ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಂದಿನಿ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿರುವುದರಿಂದ ಸಂಜೆ 8 ಗಂಟೆವರೆಗೂ ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.
ರೈತರ ಸಮಸ್ಯೆಗಳ ಸ್ಪಂದನೆಗೆ ಕೃಷಿ ಇಲಾಖೆಯಿಂದ ಸಹಾಯವಾಣಿ ಸ್ಥಾಪನೆ
ಕೋವಿಡ್-19ರ ಎರಡನೇ ಅಲೆಯ ಪ್ರಯುಕ್ತ ಹೇರಲಾಗಿರುವ ಲಾಕ್‌ಡೌನ್ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತು ಕೃಷಿ ಇಲಾಖೆ ವತಿಯಿಂದ ಕೋವಿಡ್-19 ಸಹಾಯವಾಣಿ ಸ್ಥಾಪಿಸಲಾಗಿದೆ. ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲೆಯ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೋವಿಡ್-19 ಸಹಾಯವಾಣಿ ಆರಂಭಿಸಲಾಗಿದೆ.
ರೈತರು ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ಪಡೆಯಲು ಮೊಬೈಲ್ ಸಂಖ್ಯೆ 8277931029 ಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
Share your comments