ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 2 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ.
ಇದನ್ನೂ ಓದಿರಿ: PaddyPrice | ಕ್ವಿಂಟಲ್ ಭತ್ತಕ್ಕೆ ₹2450 ನಿಗದಿ; ಜಿಲ್ಲಾಡಳಿತ ಸ್ಪಷ್ಟನೆ
ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಗುರುವಾರದಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಪ್ರತಿ ಲೀಟರ್‌ಗೆ 2 ರೂ./ಕೆಜಿಗೆ ಏರಿಕೆಯಾಗಲಿದೆ ಎಂದು ಬುಧವಾರ ಪ್ರಕಟಿಸಿದೆ.
ಟೋನ್ಡ್ ಹಾಲಿನ ಬೆಲೆ ಲೀಟರ್‌ಗೆ 37 ರೂ.ನಿಂದ 39 ರೂಪಾಯಿಗೆ ಏರಿದರೆ, ವಿಶೇಷ ಹಾಲು ಲೀಟರ್‌ಗೆ 45 ರೂಪಾಯಿ ಮತ್ತು ಮೊಸರು ಕೆಜಿಗೆ 47 ರೂಪಾಯಿ ಆಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ.
PM ಫಸಲ್ ಬಿಮಾ ಯೋಜನೆಯಲ್ಲಿ ಬದಲಾವಣೆ- ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ
ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಸ್ಥಿತಿಯ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 2 ರೂಪಾಯಿಯನ್ನು ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ (KMF) ನಿರ್ಧರಿಸಿದೆ.
ಆರಂಭದಲ್ಲಿ 3 ರೂಪಾಯಿ ಹೆಚ್ಚಳ ಮಾಡಲು ಮುಂದಾಗಿದ್ದ ಒಕ್ಕೂಟವು ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿ ಅಂತಿಮವಾಗಿ 2 ರೂಪಾಯಿ ಹೆಚ್ಚಳಕ್ಕೆ ನಿರ್ಧರಿಸಿದೆ.
“ಗ್ರಾಹಕರು ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ನಾವು ಬೆಲೆಯನ್ನು ಹೆಚ್ಚಿಸಿದ್ದೇವೆ. ನಾವು ಸಾರ್ವಜನಿಕರ ಸಹಕಾರವನ್ನು ಬಯಸುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಸಭೆಯ ನಂತರ ಹೇಳಿದರು.
ಗಮನಿಸಿ: ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ 2022 ಪ್ರಕಟ, ನವೆಂಬರ್ 26ರಂದು ಪ್ರಶಸ್ತಿ ವಿತರಣೆ
ಕೆಎಂಎಫ್ ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಮಾತನಾಡಿ, ಪ್ರತಿ 1 ರೂ.ಗೆ ರೈತರಿಗೆ 79 ಪೈಸೆ ದೊರೆಯುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮೇವಿನ ಬೆಲೆ ಹೆಚ್ಚಾಗಿದೆ ಎಂದು ಸೂಚಿಸಿದರು.
ಹೈನುಗಾರಿಕೆಯನ್ನು ಉತ್ತೇಜಿಸಲು ನಾವು ಬೆಲೆಯನ್ನು ಹೆಚ್ಚಿಸಿದ್ದೇವೆ. ಇತರ ರಾಜ್ಯಗಳು ಮತ್ತು ಖಾಸಗಿ ಹಾಲು ಪೂರೈಕೆದಾರರಿಗೆ ಹೋಲಿಸಿದರೆ, ಹಾಲಿನ ಉತ್ಪನ್ನಗಳ ಬೆಲೆ ಕರ್ನಾಟಕದಲ್ಲಿ ನಾಮಮಾತ್ರವಾಗಿದೆ ಎಂದು ಅವರು ಹೇಳಿದರು.