News

ರೈತರಿಗೆ ಸಿಹಿ ಸುದ್ದಿ: ಜೂನ್ 15ರಿಂದ ₹240ರಲ್ಲಿ ನ್ಯಾನೋ ಯೂರಿಯಾ ಮಾರುಕಟ್ಟೆಗೆ..!

29 May, 2022 10:55 AM IST By: Kalmesh T
Nano Urea to be marketed on June 15 for ₹ 240

ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಪಡಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಇದನ್ನೂ ಓದಿರಿ: 

ಗ್ರಾಮಸ್ಥರ ದಾಳಿ; 50 ಮರಿಗಳಿಗೆ ಜನ್ಮ ನೀಡಿ ಸಾವನ್ನಪ್ಪಿದ Russell's viper ಗರ್ಭಿಣಿ ಹಾವು..!

ಬಿಸಿಲಿನ ಶಾಖದಿಂದ ಈ ಬಾರಿ ಮಾವಿನ ಉತ್ಪಾದನೆಯಲ್ಲಿ ಕುಂಠಿತ: ಕೃಷಿ ತಜ್ಞರ ಅಭಿಪ್ರಾಯ

ನ್ಯಾನೋ-ಯುರಿಯಾ ಉಪಯೋಗದ ಬಗ್ಗೆ ಇಫ್ಕೋ ಸಂಸ್ಥೆ  ಶನಿವಾರ ಏರ್ಪಡಿಸಿದ್ದ ವೆಬಿನಾರ್ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ಇದು ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚದಲ್ಲಿ ಸುಮಾರು 15 ಪ್ರತಿಶತ ಕಡಿಮೆಯಾಗಲಿದೆ. ಇನ್ನು ಇಳುವರಿಯಲ್ಲಿ 15ರಿಂದ 20ರಷ್ಟು ಹೆಚ್ಚಳವಾಗಲಿದೆ ಎಂದ ಸಚಿವರು ರೈತರು ಇದನ್ನು ಹೆಚ್ಚೆಚ್ಚು ಬಳಕೆ ಮಾಡಿ ಇದರ ಲಾಭ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾಳುಮೆಣಸಿನಲ್ಲಿ ಬರುವ ರೋಗಗಳು ಮತ್ತು ಅದರ ಸಮಗ್ರ ನಿರ್ವಹಣೆ

₹23 ಲಕ್ಷಕ್ಕೆ ಬೇಡಿಕೆ ಗಿಟ್ಟಿಸಿಕೊಂಡ ಅಪರೂಪದ ಮೇಕೆ! ಏನಿದರ ವಿಶೇಷತೆ ಗೊತ್ತೆ?

ಭಾರತದಲ್ಲಿ ಈ ವರ್ಷ 350 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬೇಕಾಗಬಹುದು ಎಂದು  ಅಂದಾಜು ಮಾಡಲಾಗಿದೆ. ಆದರೆ ಈಗ ನ್ಯಾನೋ ಯೂರಿಯಾ ಮಾರುಕಟ್ಟೆಗೆ ಬರುತ್ತಿರುವದರಿಂದ ಮಾಮೂಲಿ ಯೂರಿಯಾ ಬಳಕೆ ಗಣನೀಯವಾಗಿ  ಕಡಿಮೆಯಾಗಲಿದೆ.

ಸುಮಾರು 600 ಕೋಟಿ ರು. ಸಬ್ಸಿಡಿ ಉಳಿತಾಯವಾಗಲಿದೆ. ಯೂರಿಯಾ ಆಮದು ಕಡಿಮೆಯಾಗಿ ವಿದೇಶಿ ವಿನಿಮಯ ಉಳಿಯಲಿದೆ. ಎಲ್ಲ ದೃಷ್ಟಿಯಿಂದಲೂ ನ್ಯಾನೋ ಯೂರಿಯಾ ಲಾಭಕರವಾಗಿದ್ದು ಇದನ್ನು ಜನಪ್ರಿಯಗೊಳಿಸಲು ಸರ್ಕಾರವು ಗಮನಹರಿಸಲಿದೆ ಎಂದರು.

ಕುರಿ ಸಾಕಾಣಿಕೆಯಲ್ಲಿ ಲಸಿಕೆಗಳ ಮಹತ್ವ..! ನೀವು ಇದರ ಬಗ್ಗೆ ತಿಳಿದಿರಲೇಬೇಕು..

ಮೇಕೆ ಸಾಕಾಣಿಕೆಗೆ ಲಾಭದಾಯಕವಾದ ತಳಿಗಳು ಯಾವು..? ಇಲ್ಲಿದೆ ಮಾಹಿತಿ

ಈ ಶತಮಾನ ನ್ಯಾನೋ ತಂತ್ರಜ್ಞಾನಕ್ಕೆ ಸೇರಿದ್ದಾಗಿದೆ. ಈಗ ಕೃಷಿಯಲ್ಲೂ ಇದರ ಪ್ರವೇಶವಾಗಿದೆ. ನ್ಯಾನೋ ಯೂರಿಯಾ ಕೃಷಿಗೆ ಹೊಸ ಆಯಾಮ ನೀಡಲಿದೆ.

ಮಣ್ಣಿನ ಪೌಷ್ಟಿಕಾಂಶ ಕಾಪಾಡಿಕೊಳ್ಳುವುದರ ಜೊತೆಗೆ ಸಾಗುವಳಿ ಹಾಗೂ ಸಾಗಣೆ ವೆಚ್ಚದಲ್ಲಿ ಅಪಾರ ಉಳಿತಾಯ ಮಾಡಲಿದೆ ಎಂದು ಇಫ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಎಸ್. ಅವಸ್ಥಿ ತಿಳಿಸಿದರು.