ತೊಗರಿ ಬೆಳೆಯಲ್ಲಿ ನೆಟೆರೋಗ ಕಾಣಿಸಿಕೊಂಡಿದ್ದು, ಪರಿಹಾರಕ್ಕೆ ರೈತರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವುದೇ ಸೂಕ್ತ ನಿರ್ಧಾರ ಪ್ರಕಟವಾಗಿಲ್ಲ. ಇದೀಗ ನೆಟೆ ರೋಗ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತಪರ, ಕನ್ನಡಪರ ಹಾಗೂ ದಲಿತ ಸಂಘಟನೆಗಳು ಜನವರಿ 17ರಂದು ಕಲಬುರಗಿ ಬಂದ್‌ಗೆ ಕರೆ ನೀಡಿದ್ದಾರೆ.
ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.8.3 ಹೆಚ್ಚಳ!
ಸೋಮವಾರ ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ರಾಜ್ಯ ರೈತ ಸಂಘ(ಹಸಿರು ಸೇನೆ), ನವಕರ್ನಾಟಕ ಸ್ವಾಭಿಮಾನ ವೇದಿಕೆ, ವೀರಕನ್ನಡಿಗರ ಸೈನ್ಯ, ಕರ್ನಾಟಕ ಬೀದಿ ವ್ಯಾಪಾರಿಗಳ ಸಂಘ, ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್(ಸಿಐಟಿಯು) ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಸಭೆ ನಡೆಸಿದ್ದು, ಕಲಬುರಗಿ ಬಂದ್ ಮಾಡಲು ತೀರ್ಮಾನಿಸಲಾಗಿದೆ.
Siddheshwar Swamiji: ನಡೆದಾಡುವ ದೇವರು “ಸಿದ್ಧೇಶ್ವರ ಸ್ವಾಮೀಜಿ” ಅಸ್ತಂಗತ; ಕಂಬನಿ ಮಿಡಿದ ಕೋಟ್ಯಾಂತರ ಭಕ್ತರು
ಸದನದಲ್ಲಿ ಈ ಭಾಗದಲ್ಲಿ ಉಂಟಾಗಿರುವ ನೆಟೆ ರೋಗದ ಬಗ್ಗೆ ಚರ್ಚೆ ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಸದನದಲ್ಲಿ ತೊಗರಿ ಬೆಳೆಗಾರರ ರೈತರ ಪರವಾಗಿ ಧ್ವನಿ ಎತ್ತಿಲ್ಲ. ರೈತರ ಬುದುಕಿನ ಪ್ರಶ್ನೆಯಾದ ತೊಗರಿ ಬೆಳೆಯು ನೆಟೆ ರೋಗದಿಂದ ನಾಶವಾಗಿದೆ. ತೊಗರಿ ಬೆಳೆಗಾರರಿಗೆ ಪರಿಹಾರ ಕೊಡಿಸುವಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಸೋತ್ತಿವೆ. ಹೀಗಾಗಿ, ಬಂದ್‌ಗೆ ಕರೆ ನೀಡಿದ್ದೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
Kalasa Banduri Nala Project | ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಜಲ ಆಯೋಗ ಸಮ್ಮತಿ
ನೆಟೆ ರೋಗ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಬೆಳೆ ಕಳೆದುಕೊಂಡ ರೈತರ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಕೊಡಬೇಕು. ಬೆಳೆ ವಿಮೆಯಲ್ಲಿನ ಮೋಸವನ್ನು ತಡೆಗಟ್ಟೆ, ಸೂಕ್ತ ವಿಮಾ ಹಣ ಪಾವತಿ ಹಾಗೂ ಕೃಷಿಕರ ಸಂಪೂರ್ಣ ಸಾಲ ಮನ್ನಾ ಮಾಡುವಂತಹ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
Siddaramaiah| ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ಹಿಂಪಯಲು ಸಿದ್ದರಾಮಯ್ಯ ಆಗ್ರಹ | Apmc