1. ಸುದ್ದಿಗಳು

ತೊಗರಿ ಬೆಳೆಗೆ ನೆಟೆ ರೋಗ: ₹500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆಗೆ ಪ್ರಿಯಾಂಕ್‌ ಖರ್ಗೆ ಮನವಿ

Kalmesh T
Kalmesh T
Nete disease for Toor daal crop: Priyank Kharge Requested to CM announce a special package of Rs 500 crore

ನೆಟೆ ರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

81.35 ಕೋಟಿ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ಉಚಿತ ಆಹಾರಧಾನ್ಯ: ಸಚಿವ ಸಂಪುಟ ನಿರ್ಧಾರ

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೆಳೆಗಳು ಹಾನಿಯಾದಾಗ ವಿಶೇಷ ಪ್ಯಾಕೇಜ್ ನೀಡುವಂತೆ, ಈಗ ನೆಟೆ ರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು.

ಜೊತೆಗೆ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡುವಂತೆ ತಮ್ಮಲ್ಲಿ ಈ ಪತ್ರದ ಮೂಲಕ ತಮ್ಮಲ್ಲಿ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಆಧಾರಕಾರ್ಡ್‌ ಹೊಂದಿರುವವರಿಗೆ ಕೇಂದ್ರದಿಂದ ಮಹತ್ವದ ಮಾಹಿತಿ: ನೀವಿದನ್ನು ಪಾಲಿಸಲೇಬೇಕು!

ಇಡೀ ಏಷ್ಯಾ ಖಂಡದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಜಿಲ್ಲೆಗೆ ತೊಗರಿಯ ಬಟ್ಟಲು ಎಂದೇ ಕರೆಯಲಾಗುತ್ತಿದೆ.

ಈ ಭಾಗದ ರೈತರ ಪ್ರಮುಖ ಬೆಳೆಯಾದ ತೊಗರಿ ಇಲ್ಲಿನ ಜಮೀನಿಗಳಲ್ಲಿ ಹೆಚ್ಚಾಗಿ ಬಿತ್ತನೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ತೊಗರಿ ದೇಶದ ನಾನಾ ಭಾಗಗಳಿಗೆ ರವಾನೆ ಮಾಡಲಾಗುತ್ತಿದೆ.

ಆದರೆ ಇತ್ತೀಚಿಗೆ ಎರಡು ವರ್ಷಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬೀಳುತ್ತಿರುವುದರಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ತೊಗರಿ ಫಸಲು ಬರುತ್ತಿಲ್ಲ ಎನ್ನುವುದು ಈ ಭಾಗದ ರೈತರ ಅಳಲಾಗಿದೆ.

ಈ ನಡುವೆ 2022-23 ರ ಸಾಲಿನಲ್ಲಿ 550 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಗುರಿ ಹೊಂದಲಾಗಿತ್ತು. ಅದರಲ್ಲಿ 4.78 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ.

ಆದರೆ, ಜಿಲ್ಲೆಯಲ್ಲಿ ಸುರಿದ ಅನಿಯಮಿತ ಮಳೆಯಿಂದಾಗಿ ಸುಮಾರು 130 ಲಕ್ಷ ಹೆಕ್ಟೇರ್ ಬಿತ್ತನೆ ಪ್ರದೇಶ ಸಂಪೂರ್ಣ ಹಾಳಾಗಿದೆ. ಎಡೆಬಿಡದೆ ಸುರಿದ ಮಳೆಯ ಪರಿಣಾಮ ಅತಿವೃಷ್ಟಿ ಸೃಷ್ಟಿಯಾಗಿ ತೊಗರಿ ಗಿಡಗಳು ಒಣಗ ತೊಡಗಿದ್ದವು.

ಆದರೂ ಕೂಡಾ ಅಷ್ಟೋ ಇಷ್ಟೋ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಇದೀಗ ತೊಗರಿ ಬೆಳೆಗೆ ನೆಟೆ ರೋಗ ಹೊಡೆತ ಕೊಟ್ಟಿದ್ದು ರೈತಾಪಿ ವರ್ಗ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ.

ಬಂಗಾರ ಪ್ರಿಯರಿಗೆ ಕಹಿಸುದ್ದಿ: ಚಿನ್ನದ ದರದಲ್ಲಿ ಹೆಚ್ಚಳ! ಎಷ್ಟು ತಿಳಿಯಿರಿ

ಒಂದು ಅಂದಾಜಿನ ಪ್ರಕಾರ ಬಿತ್ತನೆಯಾದ 4.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 130 ಲಕ್ಷ ಪಕ್ಷ‌, ಅತಿವೃಷ್ಟಿಯಿಂದ ಹಾಳಾಗಿದ್ದರೆ, ಉಳಿದುದರಲ್ಲಿ ಸುಮಾರು ಲಕ್ಷಕ್ಕೂ ಅಧಿಕ ಹಕ್ಟೇರ್ ಪ್ರದೇಶ ನೆಟೆ ರೋಗದಿಂದ ಸಂಪೂರ್ಣ ಹಾಳಾಗಿದೆ.

ಅಲ್ಲಿಗೆ ಅತಿವೃಷ್ಟಿ ಹಾಗೂ ನೆಟೆ ರೋಗದಿಂದ ಹಾಳಾದ ಬೆಳೆಯ ಪ್ರಮಾಣ ಶೇ 80 ರಿಂದ 901 ಎಂದು ಅಂದಾಜಿಸಲಾಗಿದೆ. ಈ ನಷ್ಟವನ್ನು ಅಳಿದುಳಿದ ಬೆಳೆಯಿಂದ ತುಂಬಿಸಿಕೊಳ್ಳುವುದು ಹೇಗೆ ಎನ್ನುವ ಚಿಂತೆ ರೈತರನ್ನು ಮತ್ತಷ್ಟು ಹೈರಾಣಾಗಿಸಿದೆ.

Published On: 28 December 2022, 11:17 AM English Summary: Nete disease for Toor daal crop: Priyank Kharge Requested to CM announce a special package of Rs 500 crore

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.