News

ಮದುವೆ ಸಮಾರಂಭಗಳಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅನುಮತಿ

09 May, 2021 10:57 AM IST By:
Marriage

ಈಗಾಗಲೇ ನಿಗದಿಯಾಗಿರುವ ಮದುವೆಗಳನ್ನು ಮನೆಗಳಲ್ಲಿ ಮಾತ್ರ ನಡೆಸುವಂತೆ ನಿರ್ಬಂಧ ವಿಧಿಸಿ ಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಹೊಸ ಆದೇಶ ಹೊರಡಿಸಿದೆ.

 ಮದುವೆಗಳಲ್ಲಿ ಸಾವಿರಾರು ಜನರು ಸೇರುವುವದರಿಂದ ಅಲ್ಲಿ ಕೊರೋನಾ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ  ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಕೊರೋನಾ ಸೋಂಕನ್ನು ಹೇಗಾದರೂ ಮಾಡಿ ನಿಯಂತ್ರಣ ಮಾಡುವುದಕ್ಕಾಗಿ ಸರ್ಕಾರ ಈ ಆದೇಶ ಹೊರಡಿಸಿದೆ.

ಈಗಾಗಲೇ ಸೋಮವಾರದಿಂದ 14 ದಿನಗಳ ಕಾಲ ಲಾಕ್ಡೌನ್ ಎಂದು ಘೋಷಿಸಿರುವ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಈಗ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದು,  ಈ ಹಿಂದೆ ಮದುವೆಗೆ 50 ಜನರಿಗೆ ಅವಕಾಶ ನೀಡಲಾಗಿತ್ತು. ಈಗ ಪರಿಷ್ಕೃತ ಆದೇಶದಲ್ಲಿ 40 ಜನರಿಗೆ ಮಾತ್ರ ಅವಕಾಶ ನೀಡಿದೆ.

ಈಗಾಗಲೇ ನಿಗದಿಯಾಗಿರುವ ಮದುವೆಗಳನ್ನು ಕಲ್ಯಾಣಮಂಟಪದಲ್ಲಿ ನೆರವೇರಿಸಲು ಅವಕಾಶವಿಲ್ಲ.  ಮನೆಗಳಲ್ಲಿಯೇ ಈ ಕಾರ್ಯಕ್ಮಮಗಳನ್ನು ಮಾಡಬೇಕೆಂದು ಆದೇಶಿಸಿದೆ. ಮದುವೆಗೆ ಕುಟುಂಬದ ಆಪ್ತರು ಸೇರಿ ಕೇವಲ 40 ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಕಲ್ಯಾಣ ಮಂಟಪ ಅಥವಾ ಸಭಾಂಗಣದಲ್ಲಿ ಮದುವೆ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶ ಹೇಳಿದೆ. ಈ ಕುರಿತು ಪರಿಷ್ಕೃತ ಆದೇಶವನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಎಂ. ಮಂಜುನಾಥ ಪ್ರಸಾದ ಶನಿವಾರ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಿಸಿದ ಜಂಟಿ ಆಯುಕ್ತರಿಂದ ಹಾಗೂ ಜಿಲ್ಲೆಗಳಲ್ಲಿ ಆಯಾ ವ್ಯಾಪ್ತಿಯ ತಹಶೀಲ್ದಾರಗಳಿಂದ ಮದುವೆ ಆಮಂತ್ರಣದ ಜೊತೆ  ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಈ ಆರ್ಜಿ ಆಧರಿಸಿ 40 ಪಾಸ್ ಗಳನ್ನು ವಿತರಿಸಲಾಗುವುದು. ಈ ಪಾಸ್ ಇದ್ದವರಿಗೆ ಮಾತ್ರ ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಮದುವೆ ಸಮಾರಂಭಕ್ಕೆ ಮದುವೆ ಆಮಂತ್ರಣ ಪತ್ರಿಕೆ ಬೇಕು. ಫಂಕನ್ ಹಾಲ್ ಗಳಲ್ಲಿ, ಗುಡಿಗುಂಡಾರಗಳಲ್ಲಿ ಮದುವೆ ಮಾಡುವಂತ್ತಿಲ್ಲ. ಮನೆಯ ಮುಂದೆಯೇ ಮದುವೆ ಕಾರ್ಯಕ್ರಮಗಳನ್ನು ಮಾಡಬೇಕು.