ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆ ದಿನ. ಇಲ್ಲಿದೆ ಈ ಕುರಿತಾದ ಸಂಪೂರ್ಣ ಮಾಹಿತಿ
ಇದನ್ನೂ ಓದಿರಿ: ರೈತರೇ ಗಮನಿಸಿ: ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಕೆಗೆ ಅ.20 ಕೊನೆ ದಿನ..
ಪ್ರತಿ ವರ್ಷ 9ನೇ ತರಗತಿಯಿಂದ ಆಯ್ದ 1 ಲಕ್ಷ ಹೊಸ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
ರಾಜ್ಯ ಸರ್ಕಾರಿ, ಸರ್ಕಾರಿ-ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 10ನೇ ತರಗತಿಯಿಂದ 12ನೇ ತರಗತಿವರೆಗೆ ಶಿಕ್ಷಣ ಮುಂದುವರಿಸಲು, ನವೀಕರಿಸಲು ಈ ಸ್ಕಾಲರ್ ಶಿಪ್ ನೀಡಲಾಗುತ್ತದೆ.
ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ! ಯಾವ ಜಿಲ್ಲೆಯಲ್ಲಿ ಏನೇನಾಗಲಿದೆ ಗೊತ್ತೆ?
ವಿದ್ಯಾರ್ಥಿವೇತನ ಮೊತ್ತ ವರ್ಷಕ್ಕೆ 12,000 ರೂ. ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಮಟ್ಟದ ಮೆರಿಟ್ ಸ್ಕಾಲರ್‌ಶಿಪ್ ಯೋಜನೆ (NMMSS)ಯನ್ನು National Means cum Merit Scholarship scheme ಪೋರ್ಟಲ್‌ನಲ್ಲಿ ಅಳವಡಿಸಲಾಗಿದೆ.
ಆರ್ಥಿಕವಾಗಿ ದುರ್ಬಲ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ ಸ್ಕಾಲರ್‌ಶಿಪ್ ಯೋಜನೆಗಳಿಗೆ ಈ ಪೋರ್ಟಲ್ ಸೂಕ್ತ ವೇದಿಕೆಯಾಗಿದೆ.
ಎನ್ಎಂಎಂಎಸ್ಎಸ್ ವಿದ್ಯಾರ್ಥಿವೇತನವನ್ನು ಡಿಬಿಟಿ ವಿಧಾನ ಅನುಸರಿಸಿ ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ (ಪಿಎಫ್ಎಂಎಸ್) ಮೂಲಕ ವಿದ್ಯುನ್ಮಾನ ವರ್ಗಾವಣೆಯ ಮೂಲಕ ಆಯ್ದ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವಿತರಿಸಲಾಗುತ್ತದೆ. ಇದು 100% ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಾಗಿದೆ.