News

Breaking: ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಟಪ್‌ ರೂಲ್ಸ್‌ ಜಾರಿ ಇಲ್ಲ-CM ಬೊಮ್ಮಾಯಿ

27 April, 2022 3:36 PM IST By: Maltesh

 

ಕೋವಿಡ್‌ ನಾಲ್ಕನೇ ಅಲೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸುವುದೂ ಸೇರಿ ಕೆಲವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸರ್ಕಾರ  ಹೊಸ ಆದೇಶ ಹೊರಡಿಸಿದೆ.

ಮಾರಕ ಕೊರೊನಾ ಮತ್ತೆ ತನ್ನ ಹಾವಳಿಯನ್ನು ಶುರು ಮಾಡುವ ಮುನ್ಸೂಚನೆ ನೀಡುತ್ತಿದೆ. 3 ಅಲೆಯ ಬಳಿಕೆ ಮತ್ತೆ ಹೆಮ್ಮಾರಿ ನಾಲ್ಕನೇ ಅಲೆಯ ಮೂಲಕ ಭಿತಿ ಸೃಷ್ಟಿಸಿಲು ನಿಂತಿದೆ. ಸದ್ಯ ಕೊರೊನಾ 4ನೇ ಅಲೆ ಬರುವ ಸಾಧ್ಯತೆ ಇರುವುದರಿಂದ ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ವಹಿಸಿದೆ. ಇನ್ನು ಇಂಯಿದು ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿ ಜೊತೆಗಿನ ಸಭೆ ಬಳಿಕ ರಾಜ್ಯದಲ್ಲಿ ಯಾವುದೇ ಟಫ್‌ ರೂಲ್ಸ್‌ ಜಾರಿ ಇಲ್ಲ ಎಂದಿದ್ದಾರೆ.

ovid 4ನೇ ಅಲೆ: ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ರಿಲೀಸ್‌..ಉಗುಳಿದರೆ ಬೀಳುತ್ತೆ ದಂಡ

ಪ್ರಧಾನಿ ಮೋದಿ ಅವರೊಂದಿಗೆ ತುರ್ತು ಸಭೆ ಮುಕ್ತಾಯದ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಸಾಫ್ಟ್ ರೂಲ್ಸ್ ಮಾತ್ರ ಜಾರಿ ಮಾಡುತ್ತೇವೆ. ಸ್ವಲ್ಪ ದಿನ ಕಾದು ನೋಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ಕೇಂದ್ರದಿಂದ ಯಾವುದೇ ನಿಯಮ ಜಾರಿಗೆ ಸೂಚನೆ ಬಾರದ ಹಿನ್ನಲೆ ಸದ್ಯಕ್ಕೆ ಕಠಿಣ ನಿಯಮ ಜಾರಿ ಮಾಡದೇ ಇರಲು ನಿರ್ಧಾರ ಮಾಡಿದ್ದೇವೆ ಎಂದರು.

ಪ್ರಧಾನಿಗಳ 3ಟಿ ಸೂತ್ರ ಅಳವಡಿಕೆಗೆ ನಿರ್ಧರಿಸಿದ್ದು, ರಾಜ್ಯದಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‍ಮೆಂಟ್ ಸೂತ್ರ ಅನುಷ್ಠಾನ ಆಗಲಿದೆ. ಇದರ ಜೊತೆಗೆ ಲಸಿಕೆ ಅಭಿಯಾನ ಚುರುಕು ಮಾಡುತ್ತೇವೆ. ಹಾಗೆಯೇ ಮಕ್ಕಳ ಲಸಿಕೆ ಅಭಿಯಾನಕ್ಕೆ ವೇಗ ಕೊಡಲು ನಿರ್ಧಾರ ಮಾಡಿದ್ದೇವೆ. 6 ರಿಂದ 12 ಮತ್ತು 15 ರಿಂದ 18 ಮತ್ತು 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವೇಗ ಹೆಚ್ಚಳ ಮಾಡಿತ್ತೇವೆ ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಹೈಕೋರ್ಟ್‌ ಸೂಚನೆ

ಕರ್ನಾಟಕದಲ್ಲಿ ಕೇಜ್ರಿವಾಲ್ ಅಲೆ! ಇಲ್ಲೂ ಸೃಷ್ಟಿಸಲಿದ್ದಾರಾ ಆಮ್ ಆದ್ಮಿ ಪಾರ್ಟಿಯ ನೆಲೆ ?

ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಬೀಳುತ್ತೆ ಫೈನ್..!

ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಂಚರಿಸುವ ವೇಳೆ ಉಗುಳಿದರೆ ದಂಡ ವಿಧಿಸಲು ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ತಡೆಯುವ ನಿಟ್ಟಿನಲ್ಲಿ ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿಯೂ ಮಾಸ್ಕ್ ಧರಿಸುವುದ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರದ ಹೊಸ ಆದೇಶದಲ್ಲಿ ತಿಳಿಸಲಾಗಿದೆ. ಕೊರೊನಾ 4ನೇ ಅಲೆಯ ಭೀತಿ ಹಿನ್ನೆಲೆ ಇತ್ತ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

PMAGY: ಬುಡಕಟ್ಟು ಹಳ್ಳಿಗಳ ಸುಧಾರಣೆಗೆ ಗುರಿ

“ರೈತರಿಗೆ ಒಳ್ಳೆಯದಾಗುವುದಾದರೇ ನಾನು ಗಲ್ಲಿಗೇರಲು ಕೂಡ ಸಿದ್ದ” ಸಿಎಂ ಬೊಮ್ಮಾಯಿ!