1. ಸುದ್ದಿಗಳು

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು-ಬಿ.ಸಿ. ಪಾಟೀಲ್

B.C. Patil

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ ವಿಮೆ ಮಾಡಿಸಿಕೊಳ್ಳುವ ವಿಮಾ ಕಂಪನಿಗಳು ಇನ್ನು ಮುಂದೆ ಬೆಳೆ ವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆಗೆ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ವಿಮಾ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ವಿಕಾಸಸೌಧದ ಕಚೇರಿಯಲ್ಲಿ ಬೆಳೆ ವಿಮೆ ಸಂಬಂಧ ಕೃಷಿ ಹಾಗೂ ತೋಟಗಾರಿಕಾ ಇಲಾಖಾಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಷ್ಟು ದಿನ ಬೆಳೆ ವಿಮಾ ಕಂಪನಿಗಳು ವಿಮೆ ಮಾಡಿಸಿಕೊಳ್ಳುವಾಗ ನಾಮಿನಿಯನ್ನು ಪರಿಗಣಿಸುತ್ತಿರಲಿಲ್ಲ. ಇದರಿಂದ ವಿಮಾದಾರ ರೈತ ಮೃತಪಟ್ಟಲ್ಲಿ ವಿಮೆ ಕಂತು ಪಡೆಯಲು ತೊಂದರೆಯಾಗುತಿತ್ತು. ರೈತರ ಅನುಕೂಲಕ್ಕಾಗಿ ಇನ್ನು ಮುಂದೆ ವಿಮಾ ಕಂಪನಿಗಳು ಕಡ್ಡಾಯವಾಗಿ ನಾಮಿನಿಯನ್ನು ಮಾಡಿಸಿಕೊಳ್ಳುವಂತೆ ಸೂಚಿಸಿದರು..

ಕೆಲವು ಕಡೆ ರೈತರು ಚಾಲ್ತಿಯಲ್ಲಿರದ ಬ್ಯಾಂಕ್ ಖಾತೆಯನ್ನು ಆಧಾರ್ ಕಾರ್ಡಿಗೆ ಜೋಡಿಸಿರುವುದು ಕಂಡುಬಂದಿದೆ. ಹಾಗಾಗಿ ರೈತರು ಚಾಲ್ತಿಯಲ್ಲಿರುವ ಬ್ಯಾಂಕ್ ಅಕೌಂಟನ್ನೇ ವಿಮೆಗೆ ಬಳಸಬೇಕು. ಆಧಾರ್ ಕಾರ್ಡ್ ಲಿಂಕ್ ಆಗಿರುವ ಅಕೌಂಟನ್ನೇ  ಬೆಳೆವಿಮೆಗೆ ದಾಖಲಿಸಬೇಕು. ಕೆಲ ರೈತರ ಖಾತೆಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿಲ್ಲ. ಹೀಗಾಗಿ ರೈತರಿಗೆ ವಿಮೆ ಹಣ ಜಮೆಯಾಗುವಲ್ಲಿ ಸಮಸ್ಯೆಯಾಗಿದೆ. ರೈತರು ಎಷ್ಟೇ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೂ ಸಹ ಆಧಾರ್ ಕಾರ್ಡ್ಗೆ ಜೋಡಿಸಿ ವಿಮೆ ಮಾಡಿಸಬೇಕು. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನೇ ಬೆಳವಿಮೆಗೆ ನಮೂದಿಸಬೇಕು ಎಂದರು

ಫಸಲ್ ಬಿಮಾ ಯೋಜನೆ ಮಾಡಿಕೊಳ್ಳುವ ವಿಮಾ ಕಂಪನಿಗಳು ಪ್ರತಿ ತಾಲೂಕಿನಲ್ಲಿ ಪ್ರತ್ಯೇಕ ಕಚೇರಿ ತೆರೆಯಬೇಕು. ಅಲ್ಲದೆ ಕಚೇರಿ ತೆರೆದ ಲೋಕೇಷನ್ ನ ಜಿಪಿಎಸ್ ಲಿಂಕ್ ಅನ್ನು ಕೃಷಿ ಇಲಾಖೆಗೆ ನೀಡಬೇಕು. ಬೆಳೆವಿಮೆ ಬಗ್ಗೆ ಎಡಿಎ, ಜೆಡಿಎಗಳು ಸಹ ಸರಿಯಾಗಿ ಮಾಹಿತಿ ಪಡೆದು ತಮ್ಮನ್ನು ಸಂಪರ್ಕಿಸುವ ರೈತರಿಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಹೇಳಿದರು.

2020 ರ ಮುಂಗಾರು ಹಂಗಾಮಿಗೆ ಒಟ್ಟು 11.01 ಲಕ್ಷ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಂಡಿರುತ್ತಾರೆ. ಒಟ್ಟು 12.81 ಲಕ್ಷ ಹೆಕ್ಟೇರ್ ಪ್ರದೇಶದ ವಿಸ್ತೀರ್ಣವೂ ಬೆಳೆ ವಿಮೆಗೆ ಒಳಪಡಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.

Published On: 24 July 2021, 09:47 PM English Summary: Nominee for crop insurance is mandatory says B.C. Patil

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.