ಈಶಾನ್ಯ ಮುಂಗಾರು ಮಳೆಯ ಭಾಗವಾಗಿ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ.
ಭಾನುವಾರ ಹಾಗೂ ಸೋಮವಾರ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಹಾಗೂ ಸೋಮವಾರದಂದು ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗಲಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು
ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮುಂದಿನ 24 ಗಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಗಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು
ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮುನ್ನೆಚ್ಚರಿಕೆ ನೀಡಿದೆ.
Gold Rate Today ಪ್ರತಿ ಗ್ರಾಂ ಚಿನ್ನದ ಬೆಲೆ ಹೇಗಿದೆ ನೋಡಿ!
ಭಾರಿ ಮಳೆ ಮುನ್ನೆಚ್ಚರಿಕೆ…..
ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗಲಿದೆ.
ಇನ್ನು ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು
ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ
ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.
ಗುಡುಗು ಮುನ್ನೆಚರಿಕೆ:
ಮುಂದಿನ 48 ಗಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.
ತಾಪಮಾನ ಎಚ್ಚರಿಕೆ!
ಉಷ್ಣಾಂಶಗಳ ಎಚ್ಚರಿಕೆ: ಇಲ್ಲ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಹವಾಮಾನ ಹೇಗಿರಲಿದೆ ?
ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ
ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಇದಾದ ನಂತರದ ದಿನಗಳಲ್ಲಿಯೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.
ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಶನಿವಾರ ರಾಜ್ಯದ ವಿವಿಧ ಭಾಗದಲ್ಲಿ ಮಳೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಉಳಿದಂತೆ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಭಾಗಮಂಡಲ (ಕೊಡಗು ಜಿಲ್ಲೆ) 4 ಸೆಂ.ಮೀ ಮಳೆಯಾಗಿರುವುದು ವರದಿಯಾಗಿದೆ.
ಇನ್ನು ಹಾರಂಗಿ (ಕೊಡಗು ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ) ತಲಾ 3: ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಮಡಿಕೇರಿ (ಕೊಡಗು ಜಿಲ್ಲೆ), ಸರಗೂರು (ಮೈಸೂರು ಜಿಲ್ಲೆ) ತಲಾ 2
ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಮೂರ್ನಾಡು, ನಾಪೋಕ್ಲು
ವಿರಾಜಪೇಟೆ (ಎಲ್ಲಾ ಕೊಡಗು ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
Share your comments