ಪ್ರಸಕ್ತ ವರ್ಷ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿಯಲ್ಲಿ ಸರ್ಕಾರದಿಂದ ಖರೀದಿ ಮಾಡಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಇತ್ತೀಚೆಗೆ ಅವರು ಮುರುಘಾ ಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮತ್ತ ಕೈಗಾರಿಕಾ ಮೇಳವನ್ನು ಉದ್ಘಾಟನಾ ಸಮಾರಂಭದಲ್ಲಿ ತಿಳಿಸಿದರು.
ಕೊರೋನಾ ಸಂಕಷ್ಟ ಇರುವುದರಿಂದ ಹಣಕಾಸಿನ ಸಮಸ್ಯೆ ಇದೆ. ಇದಲ್ಲದೆ ಮೆಕ್ಕೆಜೋಳವನ್ನು ಪಡಿತರ ಪಟ್ಟಿಯಿಂದ ಕೈಬಿಟ್ಟಿರುವುದರಿಂದ ಖರೀದಿಗೆ ಸಮಸ್ಯೆಯಾಗಿದೆ. ಪಡಿತರ ವ್ಯವಸ್ಥೆಗೆ ಮೆಕ್ಕೆಜೋಳ ಒಳಪಡಿಸದೆ ಇರುವುದರಿಂದ ಖರೀದಿಗೆ ತೊಂದರೆಯಾಗಿದೆ.
ರಾಜ್ಯಾದ್ಯಂತ ಸುಮಾರು 15 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸುಮಾರು 54 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುವ ಸಾಧತ್ಯೆಯಿದೆ. ಚಿತ್ರದುರ್ಗ, ಹಾವೇರಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಮೆಕ್ಕೆಜೋಳವನ್ನು ಹೆಚ್ಚಾಗಿ ಬೆಳೆಯಲಾಗಿದೆ. ಖರೀದಿ ಕೇಂದ್ರಕ್ಕೆ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿಗಳು ಈಗಾಗಲೇ ಮೆಕ್ಕೆಜೇಳ ಬೆಳೆದ ರೈತರಿಗೆ ಕೋವಿಡ್ ಸಮಯದಲ್ಲಿ ಪರಿಹಾರ ನೀಡಲಾಗಿದೆ. ಸಂಕಷ್ಟದಲ್ಲಿರುವ ರೈತರಿಗೆ ಬೇರೆ ಏನಾದರೂ ಸಹಾಯ ಮಾಡಲು ಮುಂದಾಗಬೇಕೆಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವದು ಎಂದು ಹೇಳಿದ್ದಾರೆ.
ಡಿಸೆಂಬರ್ ನಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಇದರೊಂದಿಗೆ ತೊಗರಿ ಖರೀದಿ ಕೇಂದ್ರ ತೆರೆಯಲು ಪರಿಶೀಲನೆ ನಡೆಸಲಾಗಿದೆ. ಚುನಾವಣೆ ಮುಗಿದ ನಂತರ ಮುಖ್ಯಮಂತ್ರಿಗಳ ಜೊತೆಗೆ ರೈತ ಮುಖಂಡರ ಸಭೆ ಕರೆದು ಬೆಂಬಲ ಬೆಲೆ, ಖರೀದಿ ಕೇಂದರ್ ಮತ್ತು ಬೆಳೆವಿಮೆ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Share your comments