ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆಯ ಅನುಮತಿಯ ಅಗತ್ಯವಿಲ್ಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗೆ ಜಂಟಿ ಸರ್ವೆ ಪರಿಹಾರವಾಗಿದೆ.
ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವನ್ಯಮೃಗ ದಾಳಿಯಿಂದ 51 ಸಾವು ಸಂಭವಿಸಿದ್ದು, ಇದರಲ್ಲಿ 29 ಸಾವು ಆನೆಗಳಿಂದಲೇ ಆಗಿದೆ ಎಂದು ನನಗೆ ತಿಳಿಸಲಾಗಿದೆ. ರಾಜ್ಯದಲ್ಲಿ ಸುಮಾರು 6 ಸಾವಿರ 30 ಆನೆ ಇದೆ ಎಂದು ಅಂದಾಜು ಮಾಡಲಾಗಿದೆ.
ಮನುಷ್ಯರ ಜೀವ ಅಮೂಲ್ಯವಾಗಿದ್ದು, ಅರಣ್ಯ ಇಲಾಖೆ ಜನರಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು. ಆನೆಗಳು ನಾಡಿಗೆ ಬರುವುದರಿಂದ ಅಪಾಯ ಹೆಚ್ಚು. ರಾಜ್ಯದಲ್ಲಿ ಸುಮಾರು 641 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗಿದೆ.
ಈ ಪೈಕಿ 310 ಕಿ.ಮೀ. ಪೂರ್ಣವಾಗಿದೆ. ಒಂದು ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಾಡಲು ಒಂದೂವರೆ ಕೋಟಿ ವೆಚ್ಚವಾಗುತ್ತದೆ. ಉಳಿದ ಕಾಮಗಾರಿ ಮಾಡಲು ಬಜೆಟ್ ನಲ್ಲಿ ಹೆಚ್ಚಿನ ಹಣ ಕೋರಲಾಗಿದೆ.
3 ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲಾಗಿದೆ. ಕಾಂಪಾ ನಿಧಿ ಬಳಸಿಕೊಂಡು ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ.
What an Idea! ಮಂಗಗಳ ಹಾವಳಿ ತಪ್ಪಿಸಲು ಕರಡಿ ವೇಷ ತೊಟ್ಟು ಬೆಳೆ ಸಂರಕ್ಷಣೆ ಮಾಡಿದ ರೈತರು!
Red Banana: ಆಧುನಿಕ ಕೃಷಿ ಪದ್ದತಿಯಿಂದ ́ಕೆಂಪು ಬಾಳೆʼ ಬೆಳೆದು ₹35 ಲಕ್ಷ ಗಳಿಸುತ್ತಿರುವ ಯುವ ರೈತ!