News

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

02 September, 2021 8:49 PM IST By:

ಪ್ರಸಕ್ತ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗÀಳಲ್ಲಿ/ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ  6 ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅಭ್ಯರ್ಥಿಗಳು ಟಿ.ಇ.ಟಿ. ಉತ್ತೀರ್ಣರಾಗಿರಬೇಕು. ಕನಿಷ್ಠ ಎರಡು ವರ್ಷದ ಅನುಭವ ಹೊಂದಿರುವ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ 9 ರೊಳಗಾಗಿ ಸಂಬAಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಕಲಬುರಗಿ, ಚಿತ್ತಾಪೂರ, ಆಳಂದ, ಸೇಡಂ, ಹಾಗೂ ಜೇವರ್ಗಿ ತಾಲೂಕುಗಳಲ್ಲಿನ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಕನ್ನಡ ವಿಷಯದ 1 ಹುದ್ದೆ, ಇಂಗ್ಲೀಷ ವಿಷಯದ 7 ಹುದ್ದೆ ಹಾಗೂ ಸಮಾಜ ವಿಜ್ಞಾನ ವಿಷಯದ 4 ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಎ. ಬಿ.ಇಡಿ ಪಾಸಾಗಿರಬೇಕು. ವಿಜ್ಞಾನ ವಿಷಯದ 4 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ. (ಸಿ.ಬಿ.ಝಡ್.) ಹಾಗೂ ಗಣಿತ ವಿಷಯದ 3 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ (ಪಿ.ಸಿ.ಎಂ.) ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಹಾಗೂ ಅಫಜಲಪೂರ-(ಮೊಬೈಲ್ ಸಂಖ್ಯೆ 7899755427), ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿ (ಮೊಬೈಲ್ ಸಂಖ್ಯೆ 9535775141), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಆಳಂದ (ಮೊಬೈಲ್ ಸಂಖ್ಯೆ 8147775722), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಸೇಡಂ (ಮೊಬೈಲ್ ಸಂಖ್ಯೆ 7892369798), ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಚಿತ್ತಾಪೂರ (ಮೊಬೈಲ್ ಸಂಖ್ಯೆ 9741168681) ಹಾಗೂ ಕಲಬುರಗಿ  ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ 08472-247260 ಗೆ ಸಂಪರ್ಕಿಸಲು ಕೋರಲಾಗಿದೆ.

4000 ಸಿವಿಲ್ ಪಿಸಿ ನೇಮಕ: ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯು 2021ನೇ ಸಾಲಿನ 4000 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯು ಅಕ್ಟೋಬರ್ 24, 2021 ರಂದು ಸಿವಿಲ್ ಪಿಸಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಿದ್ದು, ಒಂದು ವೇಳೆ ಈ ದಿನಾಂಕದ ವೇಳೆಗೆ ಕೊರೊನಾ 3 ನೇ ಅಲೆ ಅಥವಾ ಇತರೆ ಯಾವುದೇ ಅಡೆತಡೆಗಳು ಎದುರಾದಲ್ಲಿ ಮಾತ್ರ ಆ ದಿನಾಂಕದಂದು ಪರೀಕ್ಷೆ ರದ್ದು ಮಾಡಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಿದೆ. ಆದ್ದರಿಂದ ತಾತ್ಕಾಲಿಕ ದಿನಾಂಕ ಎಂದು ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪೊಲೀಸ್‌ ಇಲಾಖೆಯು ಶೀಘ್ರದಲ್ಲೇ ಕರೆ ಪತ್ರ ಅಪ್‌ಲೋಡ್ ಮಾಡಲಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ http://cpc21.ksp-online.in/ ಗೆ ಭೇಟಿ ನೀಡಿ, ಲಾಗಿನ್‌ ಆಗುವ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.