ಪಡಿತರ ಚೀಟಿದಾರರಿಗೆ ಸಂತಸದ ಸುದ್ದಿ, ಉತ್ತರ ಕರ್ನಾಟಕದಲ್ಲಿ ಬೆಳೆಯುವ ಆಹಾರ ಧಾನ್ಯಗಳಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಇದೇ ವರ್ಷ ಏಪ್ರೀಲ್ ತಿಂಗಳದಿಂದ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕದ ಪಡಿತರ ಚೀಟಿದಾರರಿಗೆ ರಾಗಿ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ.
ಕಲಬುರಗಿ ನಗರದ ಡಿಎಆರ್ ಮೈದಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕ ದಲ್ಲಿ ಬೆಳೆಯುವ ರಾಗಿಯನ್ನು ಪಡಿತರ ಚೀಟಿದಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದರು
ಜೋಳ, ತೊಗರಿ, ರಾಗಿ ನೀಡಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ಅದನ್ನು ಈಗ ಈಡೇರಿಸ ಲಾಗುತ್ತಿದೆ. ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡಿ ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದರು.