News

Odisha Train Accident : ಒಡಿಶಾದ ಬಾಲಸೋರ್‌ ರೈಲು ದುರಂತ: ಮೃತರ ಸಂಖ್ಯೆ 238ಕ್ಕೆ ಏರಿಕೆ!

03 June, 2023 12:16 PM IST By: Kalmesh T
Odisha's Balasore train accident: Death toll rises to 238!

Odisha's Balasore train accident: ಶುಕ್ರವಾರ ತಡರಾತ್ರಿ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ 238ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

Odisha's Balasore train accident: ಕೋರಮಂಡಲ ಎಕ್ಸ್‌ಪ್ರೆಸ್‌, ಬೆಂಗಳೂರು- ಹೌರಾ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣಿ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಅವಘಡ ಸಂಭವಿಸಿದೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ದುರಂತಕ್ಕೆ ರೈಲುಹಳಿಗಳಲ್ಲಿ ಉಂಟಾಗಿದ್ದ ದೋಷವೇ ಕಾರಣ ಎನ್ನಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದೆ. ಭಾರೀ ದೊಡ್ಡ ರೈಲು ಅಪಘಾತ ಇದಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ವಾಯುಪಡೆಯನ್ನು ಕರೆಸಲಾಗಿದೆ ಎಂದಿದ್ದಾರೆ. ಅಲ್ಲದೇ  ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 50,000 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ರೈಲು ದುರಂತದ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ 40 ರೈಲುಗಳನ್ನು ರದ್ದು ಮಾಡಿರುವುದು ವರದಿ ಆಗಿದೆ.   

Congress 5 guarantee approval: ಉಚಿತ ಸೌಲಭ್ಯ ಈಡೇರಿಕೆಗೆ ಸಚಿವ ಸಂಪುಟ ಅನುಮೋದನೆ! ಈ ದಿನದಿಂದಲೇ ಜಾರಿ