News

ಓಲಾ, ಊಬರ್‌ ಬಿಗ್‌ ನ್ಯೂಸ್‌: ಸಾರಿಗೆ ಇಲಾಖೆಯ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

14 October, 2022 2:09 PM IST By: Maltesh
Ola, Uber Big News: High Court interim stay on Transport Department's order

ಓಲಾ ಮತ್ತು ಉಬರ್ ವಾಹನ ಚಾಲನೆ ಮಾಡದಂತೆ ತಡೆಯಲು ಸರ್ಕಾರ ಯಾವುದೇ ದಬ್ಬಾಳಿಕೆಯ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಓಲಾ ಮತ್ತು ಉಬರ್ ಸೇವೆಗಳಿಗೆ ಸಂಬಂಧಿಸಿದ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ನಿನ್ನೆ ನಡೆದ ಸಭೆಯ ಬಗ್ಗೆ ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಓಲಾ ಮತ್ತು ಉಬರ್ ವಾಹನ ಓಡಿಸದಂತೆ ಸಾರಿಗೆ ಇಲಾಖೆ ಕೈಗೊಂಡಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ನಿಯಮಗಳ ಉಲ್ಲಂಘನೆ ಮತ್ತು ಹೆಚ್ಚಿನ ಹಣ ಪಡೆಯುತ್ತಿರುವ ಕಾರಣದಿಂದ ಕರ್ನಾಟಕದಲ್ಲಿ ಓಲಾ, ಉಬರ್ ಮತ್ತು ರ್‍ಯಾಪಿಡೋ ನಡೆಸುತ್ತಿರುವ ಎಎನ್‌ಐ ಟೆಕ್ನಾಲಜೀಸ್‌ಗೆ ಸರ್ಕಾರ ನೋಟಿಸ್ ಜಾರಿ ಮಾಡಿದ್ದು, ಇನ್ನೂ ಮೂರು ದಿನಗಳಲ್ಲಿ ಆಟೋ ಸೇವೆಗಳನ್ನು ನಿಲ್ಲಿಸಿ ವರದಿ ಸಲ್ಲಿಸುವಂತೆ ಹೇಳಿದೆ.

ಪ್ರಕರಣದ ಹಿನ್ನೆಲೆ:

ನಿಯಮಾವಳಿಗಳನ್ನು ಉಲ್ಲಂಘಿಸಿ ಅಗ್ರಿಗೇಟರ್‌ಗಳು ಆಟೋರಿಕ್ಷಾ ಸೇವೆಗಳನ್ನು ಒದಗಿಸುತ್ತಿದ್ದಾರೆ. ಅಲ್ಲದೆ, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ಗ್ರಾಹಕರಿಂದ ವಸೂಲಿ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದ್ದರ ಪರಿಣಾಮವಾಗಿ ಓಲಾ, ಉಬರ್ ಮತ್ತು ರ್‍ಯಾಪಿಡೋ ನಡೆಸುತ್ತಿರುವ ಎಎನ್‌ಐ (ANI) ಟೆಕ್ನಾಲಜೀಸ್‌ಗೆ ಸರ್ಕಾರ ನೋಟಿಸ್ ಜಾರಿ ಮಾಡಿ  ಮೂರು ದಿನಗಳಲ್ಲಿ ಆಟೋ ಸೇವೆಗಳನ್ನು ನಿಲ್ಲಿಸಿ ವರದಿ ಸಲ್ಲಿಸುವಂತೆ ಹೇಳಿತ್ತು.