News

ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ನೋಂದಾಯಿಸಲು ಸೂಚನೆ

19 July, 2023 10:43 AM IST By: Maltesh
Online Applications for Monsoon Season Crop Competition

ಕೊಪ್ಪಳ : 2023-24ನೇ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ನೋಂದಾಯಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ.

ಕೃಷಿ ಪ್ರಶಸ್ತಿ ಕಾರ್ಯಕ್ರಮವನ್ನು ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಲು ಸ್ಪರ್ಧಾತ್ಮಕ ಇಳುವರಿ ಆಧಾರದ ಮೇಲೆ, ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಲಾಗುತ್ತಿದ್ದು, ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಕೊಪ್ಪಳ ಜಿಲ್ಲೆಯ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ ಮಟ್ಟದ ಸ್ಫರ್ಧೆಗೆ ಯಾವ ಬೆಳೆಗಳು : ರಾಜ್ಯ ಮಟ್ಟದಲ್ಲಿ ಸ್ಫರ್ಧೆಗಾಗಿ ಜಿಲ್ಲೆಯ ನೀರಾವರಿ ಮತ್ತು ಮಳೆಯಾಶ್ರಿತ ಮುಂಗಾರು ಭತ್ತ ಹಾಗೂ ಮಳೆಯಾಶ್ರಿತ ಮುಂಗಾರು ಬೆಳೆಗಳಾದ ಶೇಂಗಾ, ನವಣೆ, ಸಜ್ಜೆ, ಪೂರ್ಣಬೆಳೆಯ ತೊಗರಿ, ಸೂರ್ಯಕಾಂತಿ ಮತ್ತು ಮುಸುಕಿನ ಜೋಳ, ಈ ಎಲ್ಲಾ ಬೆಳೆಗಳಿಗೆ ರೈತರು ಸ್ಪರ್ಧಿಸಬಹುದಾಗಿದೆ. 

ರೈತ ಮಹಿಳೆಯರಿಗೂ ಅವಕಾಶ : ಪ್ರಸಕ್ತ ಸಾಲಿಗೆ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಎಲ್ಲಾ ಮಟ್ಟಗಳಿಗೂ (ರಾಜ್ಯ, ತಾಲೂಕು ಅಥವಾ ಜಿಲ್ಲಾ) ಅನ್ವಯಿಸುವಂತೆ ಸಾಮಾನ್ಯ ವರ್ಗದ ರೈತರಿಗೆ ರೂ. 100ಗಳ ಪ್ರವೇಶ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ರೂ. 25ರ ಪ್ರವೇಶ ಶುಲ್ಕ ನಿಗದಿ ಪಡಿಸಿದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಯನ್ನು ಪಡೆಯಲು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನ

ವಿಶ್ವ ಹಿರಿಯ ನಾಗರಿಕರ ದಿನಾಚಾರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಒಟ್ಟು 07 ಪ್ರಶಸ್ತಿಗಳನ್ನು ರಾಜ್ಯಮಟ್ಟದಲ್ಲಿ ನೀಡಲಾಗುತ್ತಿದೆ.

ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಮೇಲ್ಕಂಡ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಂದ ಮತ್ತು ಅರ್ಹ ಸಂಸ್ಥೆಗಳಿಂದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಈ ಕಚೇರಿಯಿಂದ ಪಡೆದು ನಿಗದಿತ ನಮೂನೆಯಲ್ಲಿ ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಪ್ರಸ್ತಾವನೆಗಳನ್ನು ದ್ವಿಪ್ರತಿಯಲ್ಲಿ ಆಗಸ್ಟ್ 14ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟ್ ರಸ್ತೆ ಕೊಪ್ಪಳ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.