ವಿದ್ಯಾರ್ಥಿಗಳು ತಮ್ಮ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಸೀಟುಗಳನ್ನು ಪಡೆದು ತಮ್ಮ ಮನೆಯನ್ನು ಬಿಟ್ಟು ಬೇರೆ ಊರುಗಳಲ್ಲಿ ಹೋಗಿ ವ್ಯಾಸಂಗ ಮಾಡುವುದು ಸರ್ವೇಸಾಮಾನ್ಯ, ಕೆಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಫೀಸ್ ಕಟ್ಟಲು ತೊಂದರೆಯಾಗುವ ಸಲುವಾಗಿ ಸರ್ಕಾರವು ಸರ್ಕಾರಿ ಹಾಸ್ಟೆಲ್ ಗಳನ್ನು ಆಯಾ ತಾಲೂಕು ಹಾಗೂ ಜಿಲ್ಲೆಗಳಲ್ಲಿ ನಿರ್ಮಿಸಿದೆ.
ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ಹಾಸ್ಟೆಲ್ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆದಷ್ಟು ಬೇಗನೆ ಅಫೀಷಿಯಲ್ ವೆಬ್ಸೈಟ್ಗೆ ಹೋಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
- ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು=08372-297258
-ರೋಣ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು=08381-267120
- ಶಿರಹಟ್ಟಿ ಸಮಾಜಕಲ್ಯಾಣ ಇಲಾಖೆಯ ಸಹನಿರ್ದೇಶಕರು=08487-242312
- ಮುಂಡರಗಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು=08371-262449
- ನರಗುಂದ ಸಮಾಜಕಲ್ಯಾಣ ಇಲಾಖೆಯ ನಿರ್ದೇಶಕರು=008377-245731
Share your comments